ಕುಣಿಗಲ್
ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕುಣಿಗಲ್ : ವಿದ್ಯಾಭ್ಯಾಸಕ್ಕೆಂದು ತುಮಕೂರಿಗೆ ತೆರಳುವ ನೂರಾರು ವಿದ್ಯಾರ್ಥಿಗಳು ಸರ್ಕಾರಿ ಬಸ್ಸಿಲ್ಲದೆ ಪರದಾಡಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆಗೆ ಇಳಿದ ಘಟನೆ ಸೋಮವಾರ ನಡೆಯಿತು.
ಕುಣಿಗಲ್ ತಾಲೂಕಿನ ವಿದ್ಯಾರ್ಥಿಗಳು ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬಂದು ಉನ್ನತ ವ್ಯಾಸಂಗ ಮಾಡಲೆಂದು ತುಮಕೂರಿನ ಜಿಲ್ಲಾ ಕೇಂದ್ರದ ವಿವಿಧ ಕಾಲೇಜುಗಳಿಗೆ ತೆರಳುತ್ತಾರೆ ಆದರೆ ಕುಣಿಗಲ್ ಕೆಎಸ್ಆರ್ಟಿಸಿ ಡಿಪೋನ್ನ ಅಧಿಕಾರಿಗಳ ನಿರ್ಲಕ್ಷದಿಂದ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಬಸುಗಳಿಲ್ಲದೆ ಕಾಲೇಜುಗಳಿಗೆ
ತೆರಳಲು ತುಂಬಾ ತೊಂದರೆಯಾಗಿತ್ತು ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸುಮಾರು ಬಾರಿ ಮೌಖಿಕವಾಗಿ ಹಾಗೂ ಲಿಖಿತವಾಗಿ ವಿಷಯ ತಿಳಿಸಿದರು ಕೆ ಎಸ್ ಆರ್ ಟಿ ಸಿ ಯ ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳದೆ ತುಮಕೂರಿಗೆ ವಿದ್ಯಾಭ್ಯಾಸಕ್ಕೆಂದು ತೆರಳುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ಸುಗಳಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಅಧಿಕಾರಿಗಳ ನಿರ್ಲಕ್ಷದಿಂದ ಬೇಸತ್ತ ವಿದ್ಯಾರ್ಥಿಗಳು ಸೋಮವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆಗೆ ಇಳಿದು ಅವ್ಯವಸ್ಥೆಯ ಬಗ್ಗೆ ಧಿಕ್ಕಾರ ಕೂಗಿ ತುಮಕೂರಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಸರ್ಕಾರಿ ಬಸ್ ವ್ಯವಸ್ಥೆ ಮಾಡುವವರೆಗೂ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಅಧಿಕಾರಿಗಳ ನಿರ್ಲಕ್ಷ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಈ ಸಂಬಂಧ ಕೆಲವು ವಿದ್ಯಾರ್ಥಿಗಳು ಮಾತನಾಡಿ ಸರ್ಕಾರ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದರು ಏನು ಪ್ರಯೋಜನ ಎಂದು ಪ್ರಶ್ನಿಸಿ ಸರ್ಕಾರಕ್ಕೆ ವಿದ್ಯಾರ್ಥಿಗಳು ಇಡೀ ಶಾಪ ಹಾಕಿ ಸಕಾಲಕ್ಕೆ ಬಸ್ ಗಳನ್ನು ವ್ಯವಸ್ಥೆ ಮಾಡದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಪ್ರತಿಭಟನೆಯನ್ನು ಮುಂದುವರೆಸಿದ್ದರು ತಕ್ಷಣ ಎಚ್ಚೆತ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಕಾಲಕ್ಕೆ ಬಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.ಪ್ರತಿಭಟನೆಗೆ ಜೆಡಿಎಸ್ ತಾಲೂಕ ಅಧ್ಯಕ್ಷ ಜಗದೀಶ್ ನಾಗರಾಜಯ್ಯ ಸಾತ್ ನೀಡಿ ಅಧಿಕಾರಿಗಳನ್ನು ಬಸ್ ಅವ್ಯವಸ್ಥೆಯ ಬಗ್ಗೆ ತರಾಟೆಗೆ ತೆಗೆದುಕೊಂಡ ಘಟನೆಯು ಜರುಗಿತು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಪಿಐ ಗುರುಪ್ರಸಾದ್ ಪೊಲೀಸ್ ಬಂದೋಬಸ್ ಕೈಗೊಂಡಿದ್ದರು.