ಸರಕಾರ ಸದಾಶಿವ ಆಯೋಗದ ವರದಿ ಜಾರಿಗೊಳಿಸಲಿದೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ತುರುವೇಕೆರೆ : ಸರಕಾರವು ಸದಾಶಿವ ಆಯೋಗದ ವರದಿಯನ್ನು ಪೆಬ್ರವರಿ ತಿಂಗಳಲ್ಲಿ ಜಾರಿಗೊಳಿಸುವ ವಿಶ್ವಾಸವಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದಲ್ಲಿ ಆದಿಜಾಂಬವ ಸಮ್ಮೇಳನ ಹಾಗೂ ಸದಾಶಿವ ಜಾರಿಗೆ ಒತ್ತಾಯಿಸಿ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾದಿಗ ಸಮುದಾಯದ ಬಹುದಿನಗಳ ಬೇಡಿಕೆಯಾದ ಸದಾಶಿವ ಆಯೋಗದ ವರದಿ ಸರಕಾರಗಳು ಸ್ಪಂದಿಸುತ್ತವೆ ಎಂಬ ವಿಶ್ವಾಸವಿದೆ. ನಾಣು ಒಬ್ಬ ಮಂತ್ರಿ ಎನ್ನುವುದಕ್ಕಿಂತ ಮೊದಲು ಮಾದಿಗ ಸಮಾಜದ ನೋವಿಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ.ಮಾದಿಗ ಸಮಾಜಬಂಧುಗಳು ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳುವಂತೆ ಕಿವಿಮಾತು ಹೇಳಿದ ಅವರು ಸದಾಶಿವ ಆಯೋಗದ ಜಾರಿಗೊಳಿಸುವಂತೆ ಎಲ್ಲಾ ಶಾಸಕರು , ಸಂಸದರು, ಧ್ವನಿ ಎತ್ತುವ ಮೂಲಕ ಶೋಷಿತ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.
ಮಾಜಿ ಸಚಿವ ಆಂಜನೇಯ ಮಾತನಾಡಿ ಈ ಹಿಂಧೆ ಪರಿಶಿಷ್ಟರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಅನೇಕ ಯೋಜನೆಗಳನ್ನು ಸ್ಥಗಿತಗೊಳಿಸಿರುವುದು ವಿಷಾದನೀಯ, ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ,ಪರಮೇಶ್ವರ್ ಸಹ ಧ್ವನಿಯೆತ್ತಿದ್ದಾರೆ, ಸದಾಶಿವ ಆಯೋಗದ ವರದಿ ಜಾರಿಯಾಗದಿದ್ದರೇ ಇಡೀ ಜನಾಂಗವೇ ಸರ್ವನಾಶವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಶಾಸಕ ಮಸಾಲಜಯರಾಮ್ ಮಾತನಾಡಿ ಒಳ ಮೀಸಲಾತಿ ಜಾರಿ ಕುರಿತಂತೆ ಮುಖ್ಯಮಂತ್ರಿಗಳನ್ನು ಸಚಿವರಾದ ಗೋವಿಂದಕಾರಜೋಳ ಅವರೊಂದಿಗೆ ಬೇಟಿ ಮಾಡಿ ಒತ್ತಾಯಿಸಿದ್ದೇನೆ,ಮಾದಿಗ ಸಮುದಾಯದ ನ್ಯಾಯಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯವನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದರು.
ಕೋಡಿಹಳ್ಳಿ ಮಠದ ಷಡಕ್ಷರಿ ಸ್ವಾಮೀಜಿ ಮಾತನಾಡಿ ಮಾದಿಗ ಸಮುದಾಯ ಜಾತಿ ಮೀರಿ ಬೆಳೆಯಯವಂತಾದಾಗ ಮಾತ್ರ ಅಭಿವೃದ್ದಿ ಕಾಣುತ್ತದೆ. ಬುದ್ದಿಯನ್ನು ಬಳಸಿ ಪ್ರಬುದ್ದರಾಗುವ ಮೂಲಕ ಮುಖ್ಯವಾಹಿನಿಗೆ ಬರಬೇಕಿದೆ. ಸಮಾಜದ ಎಲ್ಲರೊಂದಿಗೂ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವುದನ್ನು ಅವಶ್ಯವಿದೆ. ಸದಾಶಿವ ಆಯೋಗದ ವರದಿ ಜಾರಿಗೆ ತರುವ ಶುಭ ಸೂಚನೆ ಸರಕಾರದಿಂದ ದೊರೆತಿರುವುದು ಆಶಾದಾಯಕ ಬೆಳವಣಿಗೆ ಎಂದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂಧಿರದಿಂದ ಆದಿಜಾಂಬವ ಸಮುದಾಯ ಬಂಧುಗಳು ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. ವೇದಿಕೆಯಲ್ಲಿ ಮಾದಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಕಲಾವಿದರನ್ನು, ನಿವೃತ್ತ ನೌಕರರನ್ನು ಅಭಿನಂದಿಸಲಾಯಿತು. ಕ್ರಾಂತಿ ಗೀತೆಗಳು ಕಾರ್ಯಕ್ರಮಕ್ಕೆ ಮೆರುಗು ತಂದವು.
ತಾಲೂಕು ಆದಿಜಾಂಬವ ಸಮಾಜದ ವಿ.ಟಿ.ವೆಂಕಟರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿರಕ್ತ ವ್ಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕರುಗಳಾದ ಗಂಗಹನುಮಯ್ಯ, ಎಂ.ಟಿ.ಕೃಷ್ಣಪ್ಪ, ಎಂ.ಡಿ.ಲಕ್ಷ್ಮೀನಾರಾಯಣ ಎಸ್. ರುದ್ರಪ್ಪ, ಹೆಚ್.ಬಿ.ನಂಜೇಗೌಡ, ಜಿ.ಪಂ. ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪ.ಪಂ. ಅಧ್ಯಕ್ಷ ಪ್ರಭಾಕರ್, ಉಪಾಧ್ಯಕ್ಷೆ ಶೀಲಾ, ಸದಸ್ಯ ಚಿದಾನಂದ್, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಡಾ.ಚಂದ್ರಪ್ಪ, ಬೋರಪ್ಪ, ದಂಡಿನಶಿವರ ಕುಮಾರ್, ಪುಟ್ಟರಾಜು, ತಿಮ್ಮೆಶ್, ಬೀಚನಹಲ್ಳಿ ರಾಮಣ್ಣ, ಹೊನ್ನೇನಹಳ್ಳಿಕೃಷ್ಣಪ್ಪ, ಇದ್ದರು.