ಜಿಲ್ಲೆತುಮಕೂರುಶಿರಾ

ಬಿಜೆಪಿ ಪಕ್ಷದಿಂದ ನಾನೂ ಕೂಡ ಟಿಕೇಟ್ ಆಕಾಂಕ್ಷಿ: ಬಿ.ಕೆ.ಮಂಜುನಾಥ್

ಶಿರಾದಲ್ಲಿ ರಾಜಕೀಯ ಸಂಚಲನ ಮೂಡಿಸಿದ ಬಿ.ಕೆ.ಮಂಜುನಾಥ್

ಶಿರಾ : ಶಿರಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಕಳೆದ 18 ವರ್ಷಗಳಿಂದ ಹಗಲು ಇರುಳೆನ್ನದೆ ಬಹಳಷ್ಟು ಶ್ರಮಿಸಿದ್ದೇನೆ, ಕಳೆದ 2018ರ ವಿಧಾನಸಭಾ ಚುನಾವಣೆ ಹಾಗೂ ಉಪ ಉಪಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಸಹಾ, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಟಿಕೇಟ್ ತ್ಯಾಗ ಮಾಡಿದ್ದೇನೆ. ಆದರೆ ಈ ಬಾರಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಸಂಘತಾತ್ಮಕ ಮದುಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್ ಹೇಳಿದರು.
ಅವರು ನಗರದ ಹೊರವಲಯದಲ್ಲಿರುವ ತಮ್ಮ ಕಚೇರಿಯಲ್ಲಿ ಪ್ರತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ನನಗೀಗ 60 ವರ್ಷ ವಯಸ್ಸಾಗಿದೆ ಹಾಗಾಗಿ ನಾನು ಕೊನೆ ಭಾರಿ ಟಿಕೇಟ್ ಕೇಳುತ್ತಿದ್ದೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಿರಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದೇನೆ. ಈ ಬಗ್ಗೆ ಬಿಜೆಪಿ ವರಿಷ್ಠರಿಗೂ ಮನವಿ ಮಾಡಿದ್ದೇನೆ. ಪಕ್ಷ ನನಗೆ ಟಿಕೇಟ್ ನೀಡಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಎಸ್. ಆರ್. ಗೌಡ ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು, ಆಗ ನಾನು ಪಕ್ಷ ವಿರೋಧಿ ಚಟುವಟಿಕೆ ಮಾಡದೆ ತಟಸ್ಥನಾಗಿದ್ದೆ. ನಂತರ ನಡೆದ ಉಪ ಉಪಚುನಾವಣೆಯಲ್ಲಿಯೂ ಸಹ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಪಕ್ಷ ಡಾ. ಸಿಎಂ ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿತು. ಆಗಲೂ ಸಹ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ. ಡಾ.ಸಿ.ಎಂ.ರಾಜೇಶ್ ಗೌಡ ಅವರ ಗೆಲುವಿಗೆ ಶ್ರಮಿಸಿದ್ದೇನೆ. ಈ ಭಾರಿ ನಾನು ಟಿಕೇಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ವರಿಷ್ಠರಿಗೂ ನನ್ನ ಮನವಿಯನ್ನು ಸಲ್ಲಿಸಿದ್ದೇನೆ. ಪಕ್ಷದ ವರಿಷ್ಠರು ಸಮೀಕ್ಷೆ ಮಾಡಿ ಟಿಕೇಟ್ ನೀಡುವುದಾಗಿ ತಿಳಿಸಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.
ಮಧುಗಿರಿ ವಿಭಾಗದಲ್ಲಿ ಮೂರು ಕ್ಷೇತ್ರಗಳಾದ ಮಧುಗಿರಿ, ಪಾವಗಡ, ಕೊರಟಗೆರೆ ಕ್ಷೇತ್ರಗಳಲ್ಲಿ ಇದುವರೆಗೂ ಬಿಜೆಪಿ ಪಕ್ಷ ಒಮ್ಮೆಯೂ ವಿಜಯಸಾಧಿಸಿಲ್ಲ. ಆದ್ದರಿಂದ ಮಧುಗಿರಿ ವಿಭಾಗದಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಬಿಜೆಪಿ ಬೂತ್ ಅಭಿಯಾನ, ವಿಜಯ ಸಂಕಲ್ಪ ಅಭಿಯಾನಗಳ ಮೂಲಕ ಬಿಜೆಪಿ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.
ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರಲ್ಲ: ನಾನು ಬಿಜೆಪಿ ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೇಟ್ ಪ್ರಭಲ ಆಕಾಂಕ್ಷಿಯಾಗಿದ್ದೆನೆ. ಆದರೆ ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಸಹ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಮಾತ್ರ ತಟಸ್ಥನಾಗುತ್ತೇನೆ ಎಂದು ಬಿ.ಕೆ.ಮಂಜುನಾಥ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಧುಗಿರಿ ವಿಭಾಗದ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಕೆ.ಶ್ರೀನಿವಾಸ, ನಗರ ಬಿಜೆಪಿ ಅಧ್ಯಕ್ಷ ವಿಜಯರಾಜ್, ಗ್ರಾಮಾಂತರ ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಸಿ.ಮಾಲಿಮರಿಯಪ್ಪ, ಬಿಜೆಪಿ ಓಬಿಸಿ ಘಟಕದ ಗ್ರಾಮಾಂತರ ಅಧ್ಯಕ್ಷ ಬಿ.ಇ.ಮಲ್ಲಯ್ಯ, ಶಿರಾ ಯೋಜನಾ ಪ್ರಾಧಿಕಾರದ ಸದಸ್ಯ ಕೃಷ್ಣಮೂರ್ತಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ರವಿಕಿರಣ್, ಎಪಿಎಂಸಿ ಉಪಾಧ್ಯಕ್ಷ ರಾಮರಾಜು, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಮುದ್ದುರಾಜ್, ಸಂತೇಪೇಟೆ ನಟರಾಜ್, ಮಾಲಿ ಸುರೇಶ್, ಮಾಲಿ ಭರತ್, ಮುದಿಮಡು ಮಂಜುನಾಥ್, ಮಹಿಳಾ ಅಧ್ಯಕ್ಷೆ ಲಲಿತಮ್ಮ, ರತ್ನಮ್ಮ, ಸುಮಾ, ತಿಪ್ಪೇಸ್ವಾಮಿ, ಹುಲಿಕುಂಟೆ ಸಂಪತ್, ಕೃಷ್ಣಮೂರ್ತಿ, ಈರಣ್ಣ, ಮದ್ದೆವಳ್ಳಿ ರಾಮಕೃಷ್ಣ, ಮನೋಹರ್ ನಾಯಕ್, ಕರಿಯಣ್ಣ, ಗೋವಿಂದರಾಜು, ಮಧು, ಧನುಷ್, ಮಂಜೇಶ್ ಸೇರಿದಂತೆ ಹಲವರು ಹಾಜರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker