ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂ ದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಬೆಂಡೋಣಿ ಗ್ರಾಮದ ಸಿದ್ದರಾಜು ಬಿ.ಎನ್ ಬಿನ್ ನರಸಿಂಹಯ್ಯ (45) ಎಂಬ ಬಡ ರೈತ ಸಾಲಬಾಧೆ ತಾಳಲಾರದೆ ತನ್ನದೇ ಜಮೀನಿನಲ್ಲಿ (ಸರ್ವೇ ನಂಬರ್ 22/2 ರಲ್ಲಿ) ಇರುವ ತುಗಲಿ ಮರಕ್ಕೆ ನೇಣು ಹಾಕಿಕೊಂಡು ಮೃತನಾಗಿದ್ದ ಘಟನೆ ಮಂಗಳವಾರ ನಡೆದಿತ್ತು..
ಕೊರಟಗೆರೆ ಕೆನರಾ ಬ್ಯಾಂಕ್ ನಲ್ಲಿ ದಾಳಿಂಬೆ ಬೆಳೆ ಬೆಳೆಯುವ ಸಲುವಾಗಿ ಐದು ಲಕ್ಷ ಸಾಲ, ವಿ ಎಸ್ ಎಸ್ ಎನ್ ಬೆಂಡೋಣಿ ಶಾಖೆಯಲ್ಲಿ ಒಂದು ಲಕ್ಷ ಸಾಲ, ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ ಹೈನುಗಾರಿಕೆಗಾಗಿ 70,000 ಸಾಲವನ್ನು ಮಾಡಿದ್ದರು ಮತ್ತು ಮಗನ ಚಿಕಿತ್ಸೆಗಾಗಿ ಸ್ಥಳೀಯ ಸಾರ್ವಜನಿಕರಲ್ಲಿ ಕೈ ಸಾಲವನ್ನು ಸಹ ಮಾಡಿ ಅತಿಯಾದ ಬಡ್ಡಿಯಿಂದ ಸಾಲವನ್ನು ತೀರಿಸಲಾಗದೆ ಕೊರಟಗೆರೆಯ ಕೆನರಾ ಬ್ಯಾಂಕ್ ಕಳುಹಿಸಿದ್ದ ಲೀಗಲ್ ನೋಟಿಸ್ ತನ್ನ ಜೇಬಿನಲ್ಲಿಯೇ ಇಟ್ಟುಕೊಂಡು ಮರಕ್ಕೆ ನೀನು ತೆಗೆದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು..
ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣವನ್ನು ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಯನ್ನು ಮುಗಿಸಿ ಮೃತ ದುರ್ದೈವಿಯ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದರು ಕುಟುಂಬಸ್ಥರ ಅಕ್ರಂದನ ಗಗನ ಮುಟ್ಟಿತ್ತು…
ಮೃತ ರೈತನ ಮನೆಗೆ ಕೊರಟಗೆರೆ ತಾಲ್ಲೂಕು ಆಡಳಿತ ಭೇಟಿ..
ಅತಿಯಾದ ಬಡ್ಡಿಸಹಿತ ಸಾಲವನ್ನು ತೀರಿಸಲಾಗದೆ ಕೆನರಾ ಬ್ಯಾಂಕ್ ನಾ ಅಧಿಕಾರಿಗಳು ಕಳಿಸಿದ್ದ ಲೀಗಲ್ ನೋಟಿಸ್ ಅನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ತನ್ನದೇ ಆದ ಜಮೀನಿನಲ್ಲಿ ತುಗಲಿ ಮರಕ್ಕೆ ನೇಣು ತೆಗೆದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ದುರ್ದೈವಿ ಸಿದ್ದರಾಜು ರವರ ಮನೆಗೆ ಕೊರಟಗೆರೆಯ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮತ್ತು ಮತ್ತು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಹೆಚ್ಚು ನಾಗರಾಜ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸಿದ್ಧರಾಜು, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಮತ್ತು ಗ್ರಾಮ ಸಹಾಯಕರುಗಳು ಭೇಟಿ ನೀಡಿ ಮೃತ ಸಿದ್ದರಾಜು ಕುಟುಂಬಸ್ಥರಿಗೆ ಧೈರ್ಯವನ್ನು ತುಂಬಿ ಸರ್ಕಾರದಿಂದ ಸಿಗುವಂತಹ ಎಲ್ಲಾ ಪರಿಹಾರಗಳನ್ನು ಕೊಡಿಸಲಾಗುವುದು ಎಂದು ತಿಳಿಸಿದರು..
ನಂತರ ಮಾತನಾಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಪರಿಹಾರ ಮತ್ತು ಸವಲತ್ತುಗಳನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದು ಹಾಗೂ ಮೃತನ ಹೆಂಡತಿಗೆ ವಿಧವಾ ವೇತನವನ್ನು ತುರ್ತಾಗಿ ನೀಡಲಾಗುವುದು ಮತ್ತು ಅಂಗವಿಕಲ ಮಗನಿಗೆ ಸರ್ಕಾರದಿಂದ ಸಿಗುವ ಮಾಶಾಸನವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳ ವರದಿಯನ್ನು ಪಡೆದು ನೀಡಲಾಗುವುದು ಎಂದು ತಿಳಿಸಿದರು..
ನಂತರ ಮಾತನಾಡಿದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಹೆಚ್ ನಾಗರಾಜ್ ಕೃಷಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಬಡ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ನಮ್ಮೆಲ್ಲರಿಗೂ ಬೇಸರ ತಂದಿದೆ. ಕೃಷಿ ಇಲಾಖೆ ವತಿಯಿಂದ ಸಿಗುವಂತಹ ಪರಿಹಾರ ಮತ್ತು ಸವಲತ್ತುಗಳನ್ನು ಮೃತರ ಕುಟುಂಬಕ್ಕೆ ನೀಡಲು ಈಗಾಗಲೇ ತಯಾರಿ ನಡೆಸುತ್ತಿದ್ದೇವೆ ಕೇವಲ ಎರಡು ದಿನಗಳಲ್ಲಿ ಕೃಷಿ ಇಲಾಖೆ ನೀಡುವ ಟಾರ್ಪಲ್, ಪೈಪ್, ಸಹಾಯಧನ ಇತ್ಯಾದಿಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.