ಮಧುಗಿರಿ : ಮಾ.19 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 100 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಮತ್ತು ಜನಮುಖಿ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ನಾಗರಾಜು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಮಧುಗಿರಿ ಕ್ಷೇತ್ರವು ಅತ್ಯಂತ ಹಿಂದುಳಿದ ತಾಲೂಕಾಗಿದ್ದು, ಯುವಕರು ಉದ್ಯೋಗ ಅರಸಿ ಬೇರೆಡೆಗೆ ವಲಸೆ ಹೋಗುತ್ತಿದ್ದು, ಇದನ್ನು ತಪ್ಪಿಸುವ ಒಂದು ಉದ್ದೇಶ ಹೊಂದಿ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐ.ಟಿ.ಐ ಡಿಪ್ಲೋಮೋ, ಬಿಎಸ್ಸಿ, ಬಿಬಿಎಂ ಸೇರಿದಂತೆ ವಿವಿಧ ವಿದ್ಯಾರ್ಹತೆಗನುಗುಣವಾಗಿ ವಿವಿಧ ಕಂಪನಿಗಳು ನೇರ ಸಂದರ್ಶನ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ.
ಇದೇ ರೀತಿಯ ಉದ್ಯೋಗ ಮೇಳವನ್ನು ತಾಲೂಕಿನಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಆಯೋಜಿಸಲು ಉದ್ದೇಶಿಸಿದ್ದು, ಇಲ್ಲಿನ ನಮ್ಮ ಜನತೆ ಉದ್ಯೋಗ ಅರಸಿ ಬೇರೆ ಕಡೆ ಹೋಗುವುದನ್ನು ತಪ್ಪಿಸಬೇಕೆಂದು ಉದ್ದೇಶಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಟಿ.ಗೋವಿಂದರಾಜು, ಉಪ್ಪಾರಹಳ್ಳಿ ಶಿವಕುಮಾರ್, ಸುಧಾಕರ್, ಚಿತ್ತಪ್ಪ, ಸಿದ್ದೇಶ್, ಹನುಮಂತರಾಯಪ್ಪ, ಕೃಷ್ಣಪ್ಪ, ಟಿ.ಗಿರೀಶ್, ರಂಗರಾಜು, ಬೊಮ್ಮಣ್ಣ, ಅಶ್ವಥಪ್ಪ, ಕನಕದಾಸು ಮುಂತಾದವರು ಇದ್ದರು.