ತುಮಕೂರು : ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಅವರ ಪರವಾಗಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ಪದಾಧಿಕಾರಿಗಳು ಸೈನ್ಯಯ ರಾಜ್ಯಾಧ್ಯಕ್ಷ ನಗುತಾ ರಂಗನಾಥ್ ಅವರ ನೇತೃತ್ವದಲ್ಲಿ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೊಳ್ಳಾಲ,ಹೊಳವನಹಳ್ಳಿ, ಹುಲಿಕುಂಟೆ,ಚನ್ನರಾಯನದುರ್ಗ, ಅಕ್ಕಿರಾಮಪುರ ಹೋಬಳಿ ಸೇರಿದಂತೆ ಕ್ಷೇತ್ರದ ಹಳ್ಳಿಗಳಲ್ಲಿ ಡಾ.ಜಿ.ಪರಮೇಶ್ವರ್ ಪರವಾಗಿ ಕಾಂಗ್ರೆಸ್ ಪಕ್ಷದ ಕರ ಪತ್ರದ ಜೊತೆಗೆ, ಕಳೆದ ಐದು ವರ್ಷಗಳಲ್ಲಿ ಪರಮೇಶ್ವರ್ ಪ್ರತಿ ಹಳ್ಳಿಗಳಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಪಟ್ಟಿಯನ್ನು ಮತದಾರರ ಮುಂದಿಟ್ಟು ಮತಯಾಚನೆ ಪ್ರಚಾರದಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್ ಪಕ್ಷ ಈಗಾಗಲೇ ಘೋಷಣೆ ಮಾಡಿರುವ ಗೃಹಲಕ್ಷಿö್ಮ 2000 ರೂ ಪ್ರತಿ ಕುಟುಂಬದ ಒರ್ವ ಮಹಿಳೆಗೆ,ಗೃಹಜೋತಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್,ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ.ಅಕ್ಕಿ,ಪದವಿಧರ ನಿರುದ್ಯೋಗಿಗೆ ಮಾಸಿಕ 3000 ರೂ ಮತ್ತು ಡಿಪ್ಲಮೋ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗೆ ಮಾಸಿಕ 1500 ರೂ ನಿರುದ್ಯೋಗ ಭತ್ಯೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಭರವಸೆಯ ಗ್ಯಾರಂಟಿ ಕಾರ್ಡು ನೀಡಿ ಮತಯಾಚನೆ ಮಾಡಲಾಯಿತು.
ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರಕಾರದ ಬೆಲೆ ಹೆಚ್ಚಳದಿಂದಾಗಿ ಜನಸಾಮಾನ್ಯರು ತತ್ತರಿಸಿದ್ದು, ಇಂದನ ಬೆಲೆ ಹೆಚ್ಚಳದಿಂದ ಇತರೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಳವಾಗಿ ಜನರ ಬದುಕು ದುಸ್ತರವಾಗಿದೆ. ಈ ವಿಚಾರವನ್ನು ಪ್ರತಿ ಮತದಾರನಿಗೂ ತಿಳಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ರಾಜ್ಯಾಧ್ಯಕ್ಷ ನಗುತಾ ರಂಗನಾಥ್ ತಿಳಿಸಿದರು.
ಈ ವೇಳೆ ಗುಲ್ಬರ್ಗದ ಜಿಲ್ಲಾಧ್ಯಕ್ಷ ಶ್ರೀಧರ್,ಮೋನಿಷ್ ಯಾದಗಿರಿ,ಷಹಾಪುರ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ್,ವಿಜಯ್ ಮಧುಗಿರಿ ತಾಲೂಕು ಅಧ್ಯಕ್ಷ,ಸಾಮಾಜಿಕ ಜಾಲತಾಣದ ಸಾಗರ್,ಸ್ಥಳಿಯ ಮುಖಂಡರಾದ ಕೆ.ಟಿ.ನರಸಿಂಹಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.