ಕುಣಿಗಲ್ : ಸಕಾಲಕ್ಕೆ ಸರಿಯಾಗಿ ರೈತರಿಗೆ ಬಡವರಿಗೆ ಸರ್ಕಾರಿ ಸೌಲಭ್ಯಗಳು ಸಿಗುವಂತಾಗಬೇಕೆಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶಾಸಕರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ ಎಚ್.ಡಿ.ರಂಗನಾಥ್ ತಿಳಿಸಿದರು.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಉಜಿನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ. ಬ್ಯಾಡರಹಳ್ಳಿ ಗ್ರಾಮದಲ್ಲಿ ಅಧಿಕಾರಿಗಳೊಂದಿಗೆ ಶಾಸಕರ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಶಾಸಕರು ಗ್ರಾಮ ವಾಸ್ತವ್ಯ ಹೂಡಿ ಮಾತನಾಡುತ್ತಾ ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿದ್ದು ರಸ್ತೆ. ಚರಂಡಿ.ವಿದ್ಯುತ್ ದೀಪ.ವಸತಿ ಸಮಸ್ಯೆ ರೈತರ ಜಮೀನಿನ ಸಮಸ್ಯೆ ಪಡಿತರ ಚೀಟಿ.ಆರೋಗ್ಯ.ಶಿಕ್ಷಣ. ಕೃಷಿ ಇಲಾಖೆ.ತೋಟಗಾರಿಕಾ ಇಲಾಖೆ ಗ್ರಾಮ ಪಂಚಾಯಿತಿ ಸೇರಿದಂತೆ ಹಲವಾರು ಇಲಾಖೆಗಳಲ್ಲಿರುವ ಸಾರ್ವಜನಿಕರ ಸಮಸ್ಯೆಗಳನ್ನ ಅಧಿಕಾರಿಯೊಂದಿಗೆ ಆಲಿಸಿ ಪರಿಹರಿಸುವ ವಿನೂತನ ಕಾರ್ಯಕ್ರಮಗಳನ್ನು ತಾಲೂಕಿನಾದ್ಯಂತ ಪ್ರತಿ ತಿಂಗಳ ಮೂರನೇ ಶನಿವಾರದಂದು ನಡೆಸುತ್ತಾ ಬಂದಿರುವುದರಿಂದ ಸಾರ್ವಜನಿಕರು ಉತ್ತಮ ಸ್ಪಂದನೆ ನೀಡುತ್ತಿದ್ದು ಮಧ್ಯರಾತ್ರಿವರಿಗೂ ರೈತರ ಸಾರ್ವಜನಿಕರ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹರಿಸಿಕೊಳ್ಳುವ ಗ್ರಾಮ ವಾಸ್ತವ್ಯವಾಗಿದ್ದು ಇತ್ತೀಚೆಗೆ ಇದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲೆಕಡುಕಲು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ವಿದ್ಯುತ್ ಪರಿಕರಗಳು ಸುಟ್ಟು ಕರಿಕಲಾಗಿದ್ದವು ಅವರಿಗೆ ನೀಡಿದ ಭರವಸೆಯಂತೆ ವೈಯಕ್ತಿಕವಾಗಿ ಸಹಾಯ ಹಸ್ತ ಚಾಚಿದರು .ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ಹಳ್ಳಿಯ ಜನರು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದ ಅವರು ಈ ಬಾರಿ ನಡೆದಂತಹ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಪ್ರಭುಗಳು ನನ್ನ ಮೇಲೆ ಅಪಾರವಾದ ನಂಬಿಕೆ ಇಟ್ಟು ಬಾರಿ ಬಹುಮತದೊಂದಿಗೆ ಎರಡನೇ ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಕೆ ಬ್ಯಾಡರಹಳ್ಳಿ ಶಾಸಕರು ಬರುವಿಕೆಗೆ ಕಾಯ್ದು ಗ್ರಾಮದಲ್ಲಿ ಗ್ರಾಮಸ್ಥರು ತಳಿಲು ತೋರಣಗಳನು ಕಟ್ಟುವ ಮೂಲಕ ಮಂಗಳವಾದ್ಯದೊಂದಿಗೆ ಪಟಾಕಿಯ ಸಿಡಿಸಿ ಎತ್ತಿನಗಾಡಿಯಲ್ಲಿ ಶಾಸಕರನ್ನು ಅದ್ದೂರಿಯಾಗಿ ಗ್ರಾಮಕ್ಕೆ ಬರಮಾಡಿಕೊಂಡರು. ಇದಕ್ಕೂ ಮುನ್ನ ಶಾಸಕರು ಹು ತ್ರಿದುರ್ಗ ಹೋಬಳಿಯ ಅನೇಕ ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು ನಂತರ ಹುಲಿಯೂರು ದುರ್ಗದಲ್ಲಿ ರಸ್ತೆ ಸುರಕ್ಷತೆಯ ಅರಿವು ಮೂಡಿಸಿ ಉಚಿತವಾಗಿ ಹೆಲ್ಮೆಟ್ ಹಂಚುವ ಮೂಲಕ ಸೆಪ್ಟೆಂಬರ್ 1ನೇ ತಾರೀಖಿನಿಂದ ದ್ವಿಚಕ್ರ ವಾಹನ ಸವಾರರು ಯಾರು ಹೆಲ್ಮೆಟ್ ಧರಿಸುವುದಿಲ್ಲ ಅಂಥವರಿಗೆ ಮುಲಾಜಿಲ್ಲದೆ ದಂಡ ವಿಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ವಿಶ್ವನಾಥ್, ಕಾರ್ಯನಿರ್ವಹಣಾಧಿಕಾರಿ ಜೋಸೆಫ್, ಡಿವೈಎಸ್ಪಿ ಲಕ್ಷ್ಮಿಕಾಂತ್, ವಲಯ ಅರಣ್ಯ ಅಧಿಕಾರಿ ಮಹಮ್ಮದ್ ಮನ್ಸೂರ್, ಒಳಗೊಂಡಂತೆ ಅನೇಕ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.