ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೊಸ ಸಂಚಲನ : ಮಾಜಿ ಶಾಸಕ ಗೌರಿಶಂಕರ್ ಸಮ್ಮುಖದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ
ತುಮಕೂರು : ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ,ಜೆಡಿಎಸ್ ಹಾಗೂ ಬಿಜೆಪಿ ತೊರೆದು ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು ಕಾಂಗ್ರೆಸ್ ಪಕ್ಷದ ದೊಡ್ಡ ಅಲೆ ಸೃಷ್ಟಿಯಾಗುತ್ತಿದೆ.
ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಸಾವಿರಾರು ಜನ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು,ಕಾರ್ಯಕರ್ತರ ಸೇರ್ಪಡೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಹೊಸ ಸಂಚಲನ ಮೂಡಿಸಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗೂಳೂರು ಜಿಲ್ಲಾಪಂಚಾಯ್ತಿ ವ್ಯಾಪ್ತಿಯ ಸಾವಿರಾರು ಕಾರ್ಯಕರ್ತರು ಜೆ ಡಿಎಸ್ ಹಾಗೂ ಬಿಜೆಪಿ ತೊರೆದು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಗೂಳೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ಉಸ್ತುವಾರಿ ಹಾಗೂ ಪ್ರಭಾವಿ ಜೆಡಿಎಸ್ ಮುಖಂಡ ಜಿ .ಪಾಲನೇತ್ರಯ್ಯ ಹಾಗೂ ಮಾಜಿ ಎಪಿಎಂಸಿ ಉಪಾಧ್ಯಕ್ಷೆ ,ನಂದಿನಿ ಡೈರಿ ಅಧ್ಯಕ್ಷೆ ಎಸ್.ವಿಜಯಕುಮಾರಿ ನೇತೃತ್ವದಲ್ಲಿ ಗೂಳೂರು ಜಿಲ್ಲಾಪಂಚಾಯ್ತಿ ವ್ಯಾಪ್ತಿಯ ಜಿಲ್ಲಾ ಪಂಚಾಯ್ತಿ,ತಾಲ್ಲೂಕು ಪಂಚಾಯ್ತಿ,ಗ್ರಾಮಪಂಚಾಯ್ತಿ ವ್ಯಾಪ್ತಿಯ ಸಾವಿರಾರು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸೇರ್ಪಡೆ ಕಾರ್ಯಕ್ರಮ ಉದ್ದೇಶಿಸಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಮಾತನಾಡಿ ಗ್ರಾಮಾಂತರ ಕ್ಷೇತ್ರ ನನ್ನ ಕರ್ಮಭೂಮಿ,ಬಳ್ಳಗೆರೆ ಬಳಿ ಮನೆ ಮಾಡಿ ನೆಲೆಸಿದ್ದೇನೆ ಯಾವುದೇ ಕಾರಣಕ್ಕೂ ಕ್ಷೇತ್ರ ತೊರೆಯುವುದಿಲ್ಲ ಎಂದರು.
ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಜೆಡಿಎಸ್ ಎದುರಾಳಿ ನಾವು ಮೊದಲಿನಿಂದಲೂ ಬಿಜೆಪಿ ಜೊತೆ ಸೆಣಸಾಡಿದ್ದೇವೆ ,ಈಗ ಏಕಾಏಕಿ ಬಿಜೆಪಿ ಜೊತೆ ಜೆಡಿಎಸ್ ವರಿಷ್ಟರು ಮೈತ್ರಿ ಮಾಡಿಕೊಂಡಿದ್ದಾರೆ, ಜಿಲ್ಲಾ ಪಂಚಾಯ್ತಿ ,ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಯಾರಿಗೆ ಮತಕೇಳಬೇಕು,ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ನಂಬಿರು ಕಾರ್ಯಕರ್ತರಿಗಾಗಿ ಕಾಂಗ್ರೆಸ್ ಪಕ್ಷ ಸೇರಿರುವುದಾಗಿ ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪರಿಣಾಮ ಮಂಬರುವ ದಿನಗಳಲ್ಲಿ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಚಿಹ್ನೆ ಹಿಡಿಯುವ ಕಾರ್ಯಕರ್ತರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಗ್ರಾಮಾಂತರದಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರವಿತ್ತು, ಕರೋನ ಆವರಿಸಿತು ಇಂತಹ ಸಂದಿಗ್ದ ಪರಿಸ್ತಿತಿಯಲ್ಲಿ ಕೋಟ್ಯಂತರ ರೂ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸಿದ್ದೇನೆ,ಈ ವೇಳೆಗಾಗಲೆ ಗ್ರಾಮಾಂತರ ಕ್ಷೇತ್ರದ ಎಲ್ಲಾ ಕೆರೆ ತುಂಬಿದ್ದವು,ಬಿಜೆಪಿ ಶಾಸಕ ಗೆದ್ದು ಆರು ತಿಂಗಳಾದರೂ ಸಹ ಕ್ಷೇತದ ಕಡೆ ತಿರುಗಿಯೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಗೂಳೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಸಾವಿರಾರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತಮ್ಮ ಮಾತೃ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.