ತುಮಕೂರುಸುದ್ದಿ

ನಗರದಲ್ಲಿ ಶ್ರದ್ಧಾಭಕ್ತಿಯಿಂದ ಹನುಮ ಜಯಂತಿ ಆಚರಣೆ

ಆಂಜನೇಯ ದೇವಸ್ಥಾನಗಳಲ್ಲಿ ಹೂವು, ತೋರಣಗಳ ಅಲಂಕಾರ, ಹಬ್ಬದ ವಾತಾವರಣ ರೀತಿಯ ಭಕ್ತಿ ಸಡಗರ

ತುಮಕೂರು : ನಗರದ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಭಾನುವಾರ ಶ್ರದ್ದಾಭಕ್ತಿಯಿಂದ ಹನುಮ ಜಯಂತಿ ಆಚರಣೆಯಾಯಿತು. ಎಲ್ಲೆಡೆ ಭಕ್ತರು ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದರ ಅಂಗವಾಗಿ ದೇವಸ್ಥಾನಗಳಲ್ಲಿ ವಿವಿಧ ಹೋಮ, ಪೂಜಾ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಇದರ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಹೂವು, ತೋರಣಗಳ ಅಲಂಕಾರ ಮಾಡಲಾಗಿತ್ತು. ದೇವಸ್ಥಾನಗಳ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ : ಹನುಮ ಜಯಂತಿ ಅಂಗವಾಗಿ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೇ ಭಕ್ತರು ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು. ಇದರ ಅಂಗವಾಗಿ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ವೈಭವದ ರಥೋತ್ಸವ ಜರುಗಿತು. ಮಂಗಳ ವಾದ್ಯಗಳೊಂದಿಗೆ ನೆರವೇರಿದ ಸ್ವಾಮಿಯ ರಥೋತ್ಸವದಲ್ಲಿ ಭಕ್ತರು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ದಿನವಿಡೀ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು. ಇದರ ಪ್ರಯುಕ್ತ ಸೋಮವಾರ ದೇವಸ್ಥಾನದ ಯುವ ಸಮಿತಿಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಆಂಜನೇಯ ಸ್ವಾಮಿಯ ಮೆರವಣಿಗೆ ಏರ್ಪಡಿಸಲಾಗಿದೆ.

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ವಿ.ಮಹದೇವಯ್ಯ, ಉಪಾಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ಶಿವಶಂಕರ್, ಖಜಾಂಚಿ ಪಾರ್ಶ್ವನಾಥ್, ಅಜಿತ್‌ಕುಮಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಯಲಾಂಜನೇಯ ಸ್ವಾಮಿ ದೇವಸ್ಥಾನ :
ನಗರದ ಬಿ.ಎ.ಗುಡಿ ಪಾಳ್ಯದ ಬಯಲಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಅಂಗವಾಗಿ ದೇವರಿಗೆ ಅರಿಷಿಣ-ಕುಂಕುಮ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದ ವಿವಿಧ ಹೋಮ, ಹವನ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ನೀಲಕಂಠಶ್ವರ ಭಜನಾ ಮಂಡಲಿಯಿAದ ಅಯ್ಯಪ್ಪ ಸ್ವಾಮಿಯ ಭಜನೆ ಏರ್ಪಡಿಸಲಾಗಿತ್ತು.

ನಗರದ ಹಲವು ಗಣ್ಯರು, ಸಂಘಟನೆಗಳ ಮುಖಂಡರು ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಪೂಜಾಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನ ಸಮಿತಿಯಿಂದ ಪ್ರಸಾದ ವಿತರಣೆಯ ವ್ಯವಸ್ಥೆ ಮಾಡಲಾಗಿತ್ತು.
ನಗರ ಪಾಲಿಕೆ ಉಪ ಮೇಯರ್ ಟಿ.ಕೆ.ನರಸಿಂಹಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಶ್ರೀನಿವಾಸ್, ಮುಖಂಡರಾದ ಟಿ.ಎಸ್.ಶ್ರೀನಿವಾಸ್, ಟಿ.ಎಲ್.ಕುಂಭಯ್ಯ, ರವೀಶ್ ಜಹಂಗೀರ್, ಲಲಿತಾ ರವೀಶ್, ಹನುಮಂತರಾಜು, ಪೆಟ್ಟಿರಾಜು, ಅರ್ಚಕರಾದ ಮಹೇಶ್ ಮೊದಲದವರು ಭಾಗವಹಿಸಿದ್ದರು.
ವರಪ್ರದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ :
ನಗರದ ಬೆಂಗಳೂರು ಗೇಟ್‌ನ ಆರ್‌ಟಿಓ ಕಚೇರಿ ಆವರಣದ ವರಪ್ರದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ 14ನೇ ವರ್ಷದ ಹನುಮ ಜಯಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಆಂಜನೇಯ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಇದರ ಪ್ರಯುಕ್ತ ವರಪ್ರದ ವೀರಾಂಜನೇಯಸ್ವಾಮಿಗೆ ಹೂವು, ವೀಳ್ಯೆಯದೆಲೆ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದ ಸಂಜೆವರೆಗೂ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.
ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀನಿವಾಸ ಪ್ರಸಾದ್, ಮುಖಂಡರಾದ ಟಿ.ಜಿ.ನರಸಿಂಹರಾಜು, ಲಕ್ಷö್ಮಣ್, ಮುರಳೀಧರ್, ಅರ್ಚಕ ಯದುನಂದನ್ ಇತರರು ಕಾರ್ಯಕ್ರಮ ನೇತೃತ್ವ ವಹಿಸಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker