ಅಪಘಾತ : ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳ ಧಾರುಣ ಸಾವು
ಕುಣಿಗಲ್ : ದ್ವಿಚಕ್ರ ವಾಹನ ಅಪಘಾತದಲ್ಲಿ ಚನ್ನಪಟ್ಟಣದ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಜರುಗಿದೆ
ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಕೃಷ್ಣಪ್ಪನ ಕೊಪ್ಪಲು ಸಮೀಪ ಸುಮಾರು ಭಾನುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ.
ಮೃತಪಟ್ಟವರು ಚನ್ನಪಟ್ಟಣ ನಿವಾಸಿಗಳಾದ ಅಮಾನುಲ್ಲಾ ಖಾನ್( 60) ಮುನಾವರ್ (50) ದುರ್ದೈವಿಗಳು ಇವರಿಬ್ಬರು ಚನ್ನಪಟ್ಟಣದಿಂದ ಹುಲಿಯೂರುದುರ್ಗಕ್ಕೆ ಸಂಬಂಧಿಕರ ಕಾರ್ಯಕ್ರಮಕ್ಕೆ ಬರುತ್ತಿದ್ದರು ಎನ್ನಲಾಗಿದೆ.
ಇವರಿಬ್ಬರು ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೃಷ್ಣಪ್ಪನ ಕೊಪ್ಪಲು ಬಳಿ ಭಾನುವಾರ ಮಧ್ಯಾಹ್ನದ ಸಮಯದಲ್ಲಿ ಯಾವುದೋ ಅಪರಿಚಿತ ವಾಹನ ಹಿಂಬದಿಯಿಂದ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು ವಿಷಯ ತಿಳಿದ ಕೆಲವರು ಇವರಿಬ್ಬರನ್ನು ಅಮಾನುಲ್ಲಾ ಖಾನ್ ರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ, ಮುನಾವರನ್ನ ಕುಂಬಳಗೋಡಿನ ರಾಜರಾಜೇಶ್ವರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡಯಾಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಈ ಸಂಬಂಧ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.