ಕುಣಿಗಲ್ : ಸ್ವಾಮೀಜಿಯ ಆಪ್ತನಾದ ಅಭಿಷೇಕ್ ನೀಡಿದ ಕೆಲವು ಮಾಹಿತಿಯನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡು ನಂತರ ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಹಾಸಂಸ್ಥಾನ ಮಠದ ಬಾಲ ಮಂಜುನಾಥ ಸ್ವಾಮೀಜಿಯನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಹಾಸಂಸ್ಥಾನದ ಮಠದ ಬಾಲ ಮಂಜುನಾಥ ಸ್ವಾಮೀಜಿ ನಮ್ಮನ್ನು ಬ್ಲಾಕ್ಮೇಲ್ ಮಾಡಿ ಹಣ ಕೇಳುತ್ತಿದ್ದಾರೆ ಎಂದು ಸ್ವಾಮೀಜಿಯವರ ಕಡೆಯಿಂದಲೇ ಕೆಲವರ ವಿರುದ್ಧ ತುಮಕೂರು ಸೈಬರ್ ಕ್ರೈಂ ನಲ್ಲಿ ದೂರು ದಾಖಲಾಗಿತ್ತು.
ಆದರೆ ಅದೇ ಆರೋಪಿಗಳು ಸ್ವಾಮೀಜಿ ಅವರ ಬೇರೊಂದು ಹಗರಣವನ್ನು ವಿಚಾರಣೆ ವೇಳೆ ಬಯಲು ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ವಾಮೀಜಿಯನ್ನು ಬಂದಿಸಿದ್ದಾರೆ ಎಂದು ಹೇಳಲಾಗಿದೆ.
ದೂರು ಕೊಟ್ಟ ಸ್ವಾಮೀಜಿ ಈಗ ಬೇರೊಂದು ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ !
ಸ್ವಾಮೀಜಿ ಆಪ್ತನಾದ ಅಭಿಷೇಕ್ ಎಂಬಾತ ಸ್ವಾಮೀಜಿಯವರ ವಿರುದ್ಧ ಅಪ್ರಾಪ್ತಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವುದಾಗಿ ಆರೋಪಿಸಿದ ಹಿನ್ನೆಲೆಯಲ್ಲಿ ಮಠಕ್ಕೆ ಗುರುವಾರ ( ಮಾರ್ಚ 7) ಸಂಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮಧ್ಯರಾತ್ರಿ ವೇಳೆಗೆ ಸ್ವಾಮೀಜಿಯನ್ನು ಬಂಧಿಸಿದ್ದಾರೆ.!
ಈ ಸಂದರ್ಭದಲ್ಲಿ ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ ವಿ ಅಶೋಕ್ ಸೇರಿದಂತೆ ಪೋಲಿಸ್ ಅಧಿಕಾರಿಗಳ ತಂಡ ಸ್ವಾಮೀಜಿಯವರನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.!
ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ವರದಿ: ರೇಣುಕಾಪ್ರಸಾದ್