ಗುಬ್ಬಿ: ಅಕ್ರಮ ಜೂಜಾಟಗಳಲ್ಲಿ ತೊಡಗಿದ್ದ ಒಂಭತ್ತು ಮಂದಿ ಜೂಜುಕೋರರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ ಒಟ್ಟು 11 ಸಾವಿರ ರೂಗಳನ್ನು ವಶಕ್ಕೆ ಪಡೆದ ಪ್ರಕರಣ ಗುಬ್ಬಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಕಸಬ ಹೋಬಳಿ ಜಿ.ಹೊಸಹಳ್ಳಿ ಬಳಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಗುಬ್ಬಿ ಪಿ.ಎಸ್.ಐ ಸುನಿಲ್ ಕುಮಾರ್ ನೇತೃತ್ವದ ತಂಡ 7800 ರೂಗಳನ್ನು ವಶಕ್ಕೆ ಪಡೆದು 6 ಮಂದಿಯನ್ನು ಬಂದಿಸಿದ್ದು ಜೊತೆಗೆ ಮತ್ತೊಂದು ಪ್ರಕರಣ ಪ್ರಭುವನಹಳ್ಳಿ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜಾಟದ ಮೇಲೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು 3200 ರೂಗಳನ್ನು ವಶಕ್ಕೆ ಪಡೆದು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಒಟ್ಟಾರೆಯಾಗಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಯುಗಾದಿ ಹಬ್ಬದ ಹಿನ್ನಲೆ ಸಾರ್ವಜನಿಕರು ಯಾವುದೇ ರೀತಿಯ ಜೂಜಾಟದಲ್ಲಿ ತೊಡಗುವುದಾಗಲಿ ಅಥವಾ ಇಂತಹ ಅಕ್ರಮ ಜೂಜಾಟಕ್ಕೆ ಅವಕಾಶ ಮಾಡಿಕೊಡುವುದಾಗಲಿ ಪ್ರೋತ್ಸಾಹ ಕೊಡುವುದಾಗಲಿ ಮಾಡಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದರೂ ಯಾವುದಕ್ಕೂ ಕೇರ್ ಮಾಡಾದ ಕೆಲ ಮಂದಿ ಜೂಜಾಟ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಗುಬ್ಬಿ ಪಿ.ಎಸ್ ಐ ಸುನಿಲ್ ಕುಮಾರ್ ಜೂಜಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.