
ಗುಬ್ಬಿ: ಅಕ್ರಮವಾಗಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಗುಬ್ಬಿ ಪೊಲೀಸರು ಆರು ಜನರನ್ನು ಬಂಧಿಸಿ, ಪಣಕ್ಕಿಟ್ಟಿದ್ದ 6,300 ರೂಗಳನ್ನು ವಶಕ್ಕೆ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ನಡುವಲಪಾಳ್ಯ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಗುಬ್ಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ನಡುವಲಪಾಳ್ಯ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿ.ಪಿ.ಐ ಗೋಪಿನಾಥ್ ನೇತೃತ್ವದಲ್ಲಿ ಗುಬ್ಬಿ ಪಿ.ಎಸ್ ಐ.ಸುನಿಲ್ ಕುಮಾರ್ ಅವರ ತಂಡ ದಾಳಿ ನಡೆಸಿ ಅಕ್ರಮ ಜೂಜಾಟದಲ್ಲಿ ತೊಡಗಿದ್ದ ಆರು ಜನರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.