ಜಿಲ್ಲೆತುಮಕೂರುತುಮಕೂರು ನಗರಸುದ್ದಿ

ಮನಸ್ಸು ಮತ್ತು ಭಾವನೆಗಳನ್ನು ಶುದ್ಧಿಗೊಳಿಸುವಂತಹದ್ದು ಹಬ್ಬಗಳ ಆಚರಣೆಯ ಮುಖ್ಯ ಸಂದೇಶ : ಶ್ರೀ ಸಿದ್ಧಲಿಂಗ ಸ್ವಾಮೀಜಿ

ಶ್ರೀ ಸಿದ್ದಿವಿನಾಯಕನ 48ನೇ ವರ್ಷದ 28 ದಿನಗಳ ಗಣೇಶೋತ್ಸವಕ್ಕೆ ವಿದ್ಯುಕ್ತ ಚಾಲನೆ

ತುಮಕೂರು : ಇಲ್ಲಿನ ವಿನಾಯಕ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 48ನೇ ವರ್ಷದ 28 ದಿನಗಳ ಗಣೇಶೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.
ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿಯಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಚಾಲನೆ ನೀಡಲಾಯಿತು.
48ನೇ ವರ್ಷದ ಗಣೇಶೋತ್ಸವದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಮನಸ್ಸು ಮತ್ತು ಭಾವನೆಗಳು ಶುದ್ಧಿಗೊಳಿಸುವಂತಹದ್ದು ಹಬ್ಬಗಳ ಆಚರಣೆಯ ಮುಖ್ಯ ಸಂದೇಶವಾಗಿದೆ, ಎಲ್ಲ ಸಮುದಾಯದವರು ಸಾಂದರ್ಭಿಕವಾಗಿ ಹಬ್ಬಗಳನ್ನು ಆಚರಣೆ ಮಾಡುತ್ತಾ ಬಂದಿದ್ದಾರೆ ಎಂದರು.
ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿಯವರು ಕಳೆದ 48 ವರ್ಷಗಳಿಂದ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇನ್ನು ಎರಡು ವರ್ಷ ಕಳೆದರೆ ಸುಪರ್ಣ ಮಹೋತ್ಸವ ಆಚರಿಸುವ ಸಂದರ್ಭ ಬಹುತ್ತಿದೆ. ಮತ್ತಷ್ಟು ಜನರನ್ನು ಸೇರಿಸುವ ಮೂಲಕ ಸುವರ್ಣ ಮಹೋತ್ಸವವನ್ನು ಬಹಳ ಅದ್ದೂರಿಯಿಂದ ಆಚರಿಸಬೇಕು ಎಂದರು.
ಗಣೇಶ ಹಬ್ಬಕ್ಕೆ ವಿಶೇಷತೆ ಏನೆಂದರೆ ಸ್ವಾತಂತ್ರ್ಯೋತ್ಸವ ಕ್ಕೆ ಒಳ್ಳೆಯ ಕೊಡುಗೆಯನ್ನು ಕೊಟ್ಟಂತಹ ಉತ್ಸವ ಎಂದರೆ ಅದು ಗಣೇಶೋತ್ಸವ ಎಂದು ಹಮ್ಮೆಯಿಂದ ಹೇಳಿಕೊಳ್ಳಬಹುದು. ಬಾಲಗಂಗಾಧರನಾಥ ತಿಲಕ್ ಅವರು ಮಹಾರಾಷ್ಟçದಲ್ಲಿ ಬಹಳ ವಿಶೇಷವಾಗಿ ಆಚರಿಸಿಕೊಂಡು ಬಂದಿದ್ದರು. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕವಾಗಿ ಹಬ್ಬ ಆಚರಣೆಯಾದ ಬಳಿಕ ಈ ಹಬ್ಬ ಮತ್ತಷ್ಟು ಮಹತ್ವ ಪಡೆದುಕೊಂಡಿದೆ ಎಂದರು.
ಮನೆಗಳಲ್ಲಿ ಗಣೇಶೋತ್ಸವನ್ನು ಮಾಡಿಕೊಳ್ಳುವಂತಹ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಗ್ರವಾಗಿ ಒಟ್ಟಾಗಿ ಸೇರಿ ಐಕ್ಯತೆಯಿಂದ ಗಣೇಶೋತ್ಸವವನ್ನು ಮಾಡಬೇಕೆಂಬ ವ್ಯವಸ್ಥೆ ಮಾಡಿ ಜನರಲ್ಲಿ ಸ್ವಾತಂತ್ರ್ಯೋತ್ಸವ ದ ಕಿಚ್ಚನ್ನು ಹಚ್ಚಬೇಕು ಎಂಬ ಉದ್ಧೇಶವನ್ನಿಟ್ಟುಕೊಂಡು ಪ್ರಾರಂಭ ಮಾಡಿದರು ಎಂದು ಹೇಳಿದರು.

ಗಣೇಶೋತ್ಸವ ಧಾರ್ಮಿಕ ಆಚರಣೆಯಾಗಿದ್ದು, ಇದಕ್ಕೆ ಸಾಂಸ್ಕöÈತಿಕ ಆಯಾಮ ಅದರ ಜೊತೆಗೆ ಸ್ವಾತಂತ್ರ್ಯೋತ್ಸವ ದ ಕೊಡುಗೆಯೂ ಸಹ ಹಿನ್ನಲೆಯಲ್ಲಿರುವಂತಹದ್ದು, ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿಯವರು 28 ದಿನಗಳ ಕಾಲ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳ ಬಹಳ ಅಚ್ಚುಕಟ್ಟಾಗಿ ನಡೆಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎಂದರು.
ಮಹಾದ್ವಾರ ಉದ್ಘಾಟಿಸಿದ ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಡೀ ನಾಡು ಸಂಭ್ರಮದಿಂದ ಗಣೇಶನ ಪ್ರತಿಷ್ಠಾಪನಾ ಉತ್ಸವದಲ್ಲಿ ಭಾಗಿಯಾಗಿದೆ. ಹಾಗೆಯೇ ಸಿದ್ದಿವಿನಾಯಕ ಸೇವಾ ಮಂಡಳಿ ಕಳೆದ 48 ವರ್ಷಗಳಿಂದ ನಗರದಲ್ಲಿ ಗಣಪತಿ ಹಬ್ಬವನ್ನು ಮಾಡುತ್ತಾ ಬಂದಿದೆ. ನಿರಂತರವಾಗಿ 48 ವರ್ಷಗಳಿಂದ ವಿಘ್ನೇಶ್ವರನ ಜಾತ್ರೆ ನಡೆಸಿಕೊಂಡು ಬರುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಗಣೇಶ ಸಂಘಟನೆಗೆ ಪ್ರಧಾನ ದೇವತೆ, ಇದನ್ನೇ ಅರಿತೇ ತಿಲಕರು ಸ್ವಾತಂತ್ರ ಹೋರಾಟದಲ್ಲಿ ಜನರನ್ನು ತೊಡಗಿಸಲು ಸಾಮೂಹಿಕ ಗಣೇಶ ಉತ್ಸವಗಳನ್ನು ಆರಂಭಿಸಿದರು. ಅದನ್ನು ಇಂದಿಗೂ ಮುಂದುವರೆಸಿಕೊAಡು ಬರಲಾಗುತ್ತಿದೆ. ಘರ್ ಘರ್ ಮೇ ಗಣಪತಿ ಹೋಗಿ, ಇಂದು ಗಲ್ಲಿ ಗಲ್ಲಿಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯುತ್ತಿದೆ. ಇದು ಒಳ್ಳೆಯ ಬೆಳೆವಣಿಗೆ, ಯುವಜನತೆ ಹೆಚ್ಚಿನ ರೀತಿಯಲ್ಲಿ ಇದರಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಂಘಟನೆಯ ದೃಷ್ಟಿಯಿಂದ ಒಳ್ಳೆಯದು ಎಂದರು.
ದೃಶ್ಯಾವಳಿ ಉದ್ಘಾಟಿಸಿ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಭಾರತೀಯ ಧಾರ್ಮಿಕ ಪರಂಪರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಳಸ ಪ್ರಾಯವಾಗಿದೆ ಎಂದರು.
ಮುAದಿನ ದಿನಗಳಲ್ಲಿ ಸಿದ್ದಿವಿನಾಯಕ ಸೇವಾ ಮಂಡಳಿಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕರ ಅನುದಾನ ನೀಡುವುದಾಗಿ ಭರವಸೆ ನೀಡಿದ ಅವರು, ಮಂಡಳಿಯ ಇತಿಹಾಸ ಕಾಪಾಡಿಕೊಂಡು ಹೋಗುವುದು ಮಂಡಳಿಯ ಪ್ರತಿಯೊಬ್ಬ ಸದಸ್ಯರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಪ್ರತಿ ಏರಿಯಾ, ಬೀದಿ ಬೀದಿಗಳಲ್ಲಿ ಹತ್ತತ್ತು ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆಸುತ್ತಿರುವುದರಿಂದ ಮಂಡಳಿಯ ಕಾರ್ಯಕ್ರಮದಲ್ಲಿ ಜನ ಕಡಿಮೆಯಾಗಿದೆ. ವಿಸರ್ಜನೆ ಸಂದರ್ಭದಲ್ಲಾದರೂ ಎಲ್ಲರನ್ನು ಒಗ್ಗೂಡಿಸಿಕೊಂಡು ಉತ್ಸವ ಮಾಡಿದರೆ ಒಂದು ಹಿರಿಮೆ ಬರುತ್ತದೆ ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ, ರಾಜ್ಯದಲ್ಲಿ ಅತಿಹೆಚ್ಚು ಹಳೆಯ ಇತಿಹಾಸವನ್ನು ಸಿದ್ದಿವಿನಾಯಕ ಸೇವಾ ಮಂಡಳಿ ಹೊಂದಿದೆ. ಭಕ್ತಿ ಭಾವದಿಂದ ಒಗ್ಗಟ್ಟಿನಿಂದ ಗಣೇಶೋತ್ಸವವನ್ನು ಆಚರಿಸುತ್ತಿರುವುದು ಸಂತೋಷಕರ ವಿಚಾರ ಎಂದರು.
ಗಣೇಶ ಹಬ್ಬ ಸಮಾಜದಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಎಲ್ಲರಲ್ಲೂ ಮನೆಯಲ್ಲೇ ಕುಳಿತು ಹಬ್ಬ ಆಚರಿಸುವ ಬದಲು ಇಂತಹ ಮಂಡಳಿಗಳಿಗೆ ಸಹಕಾರ ನೀಡಿ ಹಬ್ಬ ಆಚರಣೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.
ಸಿದ್ದಿವಿನಾಯಕ ಸೇವಾ ಮಂಡಳಿಯ ಅಧ್ಯಕ್ಷ ಹೆಚ್.ಆರ್.ನಾಗೇಶ್ ಮಾತನಾಡಿ, 1977ರಿಂದ ಈ ಸಿದ್ದಿ ವಿನಾಯಕ ಸೇವಾ ಮಂಡಳಿ ಶ್ರೀ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಆರಂಭವಾದ ಗಣೇಶಮೂರ್ತಿ ಪ್ರತಿಷ್ಠಾಪನೆ ಯಾವುದೇ ವಿಘ್ನವಿಲ್ಲದೆ ನಡೆಯುತ್ತಿದೆ. ಸುಮಾರು 28 ದಿನಗಳ ಕಾಲ ನಡೆಯುವ ಸಾಂಸ್ಕöÈತಿಕ ಉತ್ಸವದಲ್ಲಿ ದೇಶದ ಹಿರಿಯ ಕಲಾವಿದರು ಪಾಲ್ಗೊಂಡು ಕಾರ್ಯಕ್ರಮ ನೀಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಸಮುದಾಯಭವನ್ನು ಶುಭ ಸಮಾರಂಭಗಳಿಗೆ ಅತಿ ಕಡಿಮೆ ಬಾಡಿಗೆಗೆ ನೀಡುತ್ತಿದ್ದೇವೆ ಎಂದು ಹೇಳಿದರು.
ಮಂಡಳಿಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಕಲಾಮಂಟಪ, ಆವರಣದಲ್ಲಿ ಕಾಂಕ್ರೀಟ್ ಹಾಕಲಾಗಿದೆ. ಇದರೊಂದಿಗೆ ಅಗತ್ಯ ಇರುವ ಕೆಲಸ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.
ಮುಂದಿನ 2 ವರ್ಷದಲ್ಲಿ ಮಂಡಳಿಗೆ 50 ವರ್ಷ ತುಂಬಲಿದ್ದು, ಶ್ರೀಗಳ ಆಶಯದಂತೆ ಸುವರ್ಣ ಮಹೋತ್ಸವವನ್ನು ಎಲ್ಲರನ್ನು ಒಗ್ಗೂಡಿಸಿಕೊಂಡು ಬಹಳ ಅದ್ದೂರಿಯಿಂದ ಆಚರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ಹೆಚ್.ಆರ್. ನಾಗೇಶ್, ಉಪಾಧ್ಯಕ್ಷ ಟಿ.ಹೆಚ್. ಪ್ರಸನ್ನಕುಮಾರ್, ಕೋರಿ ಮಂಜಣ್ಣ, ರಾಘವೇಂದ್ರ, ಜಗಜ್ಯೋತಿ ಸಿದ್ದರಾಮಯ್ಯ ಟಿ.ಎಸ್, ಪ್ರಭು ಎಸ್.ಜಿ., ಆರ್.ಜೆ. ಸುರೇಶ್, ರೇಣುಕಾ ಪರಮೇಶ್, ಜಿಯಾವುಲ್ಲಾ, ಅನುಸೂಯಮ್ಮ, ನಟರಾಜು, ಶ್ರೀನಾಥ್ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker