ಮಧುಗಿರಿ : ಚಿರತೆಯೊಂದು ಮೂರು ಕುರಿಗಳ ಮೇಲೆ ದಾಳಿ ಮಾಡಿರುವ ಘಟನೆ ಭಾನುವಾರ ನಡೆದಿದೆ.
ತಾಲೂಕಿನ ಕಸಬಾ ವ್ಯಾಪ್ತಿಯ ಸೋಗೇನಹಳ್ಳಿ ಗ್ರಾಮದ ಈರಲಿಂಗಮ್ಮ ಎನ್ನುವವರಿಗೆ ಸೇರಿದ ಕುರಿಗಳಾಗಿದ್ದು ಭಾನುವಾರ ಬೆಳಗಿನ ಜಾವ ರೊಪ್ಪದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು ಮೂರು ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದ್ದು ಇಲಾಖೆಯ ವತಿಯಿಂದ ಪರಿಹಾರ ಒದಗಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.