ಸುದ್ದಿ

ಭಾಷೆ,ಜಾತಿ,ಧರ್ಮದ ಹೆಸರಿನಲ್ಲಿ ಭಿನ್ನತೆ ನಿಸರ್ಗಕ್ಕೆ ವಿರುದ್ದ : ಡಾ.ನಟರಾಜು ಬೂದಾಳ್

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ

ತುಮಕೂರು : ಭಾರತೀಯರೆಲ್ಲಾಒಂದೇ.ಅವರ ನಡುವೆ ಭಾಷೆ, ಜಾತಿ, ಧರ್ಮದ ಹೆಸರಿನಲ್ಲಿ ಭಿನ್ನತೆ ಇರಬಾರದು ಎಂಬುದು ನಿಸರ್ಗಕ್ಕೆ ವಿರುದ್ದವಾಗಿದೆ. ಬಹುತ್ವವೇ ಭಾರತದ ನಿಜವಾದ ತಿರುಳು ಎಂದು ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾದ್ಯಾಪಕ ಡಾ.ನಟರಾಜು ಬೂದಾಳ್ ಪ್ರತಿಪಾದಿಸಿದ್ದಾರೆ.
ನಗರದ ಏಂಪ್ರೆಸ್ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿರುವ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ ಎರಡನೇ ದಿನದ ವಿಚಾರಗೋಷ್ಠಿಯಲ್ಲಿ ದಲಿತ ಚಳವಳಿಯ ಚಾರಿತ್ರಿಕ ಮಹತ್ವ ಮತ್ತು ವರ್ತಮಾನದ ಸವಾಲುಗಳು ಎಂಬ ವಿಷಯ ಕುರಿತು ಮಾತನಾಡಿದ ಅವರು,ನಿಸರ್ಗ ಹೇಗೆ ಎಲ್ಲಾ ಪ್ರಾಣಿ ಪಕ್ಷಿಗಳಿಗೆ ಅದರದ್ದೇ ಆದ ರೀತಿಯಲ್ಲಿ ಬದುಕಲು ಅವಕಾಶ ನೀಡಿದೆಯೋ,ಅದೇ ರೀತಿ ದೇಶದಲ್ಲಿ ಬದುಕುತ್ತಿರುವ ಎಲ್ಲಾ ಸಮುದಾಯಗಳ ನಡುವೆ ಭಿನ್ನತೆ ಇದೆ.ಅವರ ಆಚಾರ, ವಿಚಾರಗಳು ಬೇರೆ ಬೇರೆಯಾಗಿವೆ.ಎಲ್ಲವೂ ಒಂದೇ ಎಂಬುದು ಪ್ರಕೃತಿಗೆ ವಿರುದ್ದವಾಗಿದೆ ಎಂದರು.

ಪುರಾಣದ ಬಲಿ ಚಕ್ರವರ್ತಿಯ ಪ್ರಕರಣ ಇಂದಿಗೂ ಮುಂದುವರೆದಿದೆ.ಶೇ2.5ರಷ್ಟಿರುವ ಬ್ರಾಹ್ಮಣ ಧರ್ಮ, ಶೇ97ರಷ್ಟಿರುವ ಶೂದ್ರ ಸಮಾಜವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡಿದೆ.ಶೂದ್ರ ಸಮಾಜ ತಮ್ಮ ಆಚಾರ,ವಿಚಾರಗಳನ್ನು ಬದಿಗಿರಿಸಿ ನಿಧಾನವಾಗಿ ಬ್ರಾಹ್ಮಣ ಧರ್ಮವನ್ನು ಅನುಸರಿಸಲು ಮುಂದಾಗುತ್ತಿದ್ದೇವೆ.ಮನೆ ಕಟ್ಟುವುದು,ಮಗುವಿನ ಹೆಸರಿಡುವುದು. ಮಗನಿಗೆ ಮದುವೆ ಇಂತಹ ವಿಚಾರಗಳಲ್ಲಿ ಈಗಾಗಲೇ ಹಾಸು ಹೊಕ್ಕಾಗಿದೆ.ಇದನ್ನು ತಿರಸ್ಕರಿಸುವ ಧೈರ್ಯವನ್ನು ವಿದ್ಯಾವಂತ ದಲಿತರು ತೋರುತ್ತಿಲ್ಲ.ಇದು ವಿಪರ್ಯಾಸದ ಸಂಗತಿ.ವೈಜ್ಞಾನಿಕವಾಗಿ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಬೇಕಿದೆ.ಇದೇ ಮುಂದಿರುವ ದೊಡ್ಡ ಸವಾಲು ಎಂದು ಡಾ.ನಟರಾಜ್ ಬೂದಾಳ್ ತಿಳಿಸಿದರು.
ಒಳಮೀಸಲಾತಿ ಸುಪ್ರಿಂಕೋರ್ಟಿನ ತೀರ್ಪು ಮತ್ತು ಸಾಮಾಜಿಕ ನ್ಯಾಯ ಕುರಿತು ಮಾತನಾಡಿದ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಡಾ.ರವಿಕುಮಾರ್ ನೀಹ, ಪರಿಶಿಷ್ಟರೆಲ್ಲಾ ಒಂದೇ ಎಂಬ ನ್ಯಾಯಮೂರ್ತಿ ಸಂತೋಷ ಹೆಗಡೆ ಅವರ ತೀರ್ಪನ್ನು 2024ರ ಆಗಸ್ಟ್ 01ರಂದು ಬಂದ ಸುಪ್ರಿಂಕೋರ್ಟು ತೀರ್ಪ ಒಡೆದು ಹಾಕಿದೆ. ಹೇಗೆ ಪ್ರಕೃತಿಯಲ್ಲಿ ಭಿನ್ನತೆ ಇದೆಯೋ, ಅದೇ ರೀತಿ ಪರಿಶಿಷ್ಟ ಜಾತಿಗಳಲ್ಲಿಯೂ ಭಿನ್ನತೆ ಇದೆ ಎಂಬುದು ಒಪ್ಪಿಕೊಂಡೇ, ಸಾಮಾಜಿಕ ನ್ಯಾಯ ಹಾಗೂ ಸಮಾನ ಪ್ರಾತಿನಿದ್ಯ ಹಾಗೂ ಅದಕ್ಕೆ ಬೇಕಾದ ದತ್ತಾಂಶಗಳೊಂದಿಗೆ ಹೆಜ್ಜೆ ಇಡುವಂತೆ ಸೂಚಿಸಿದೆ.ಸಾಮಾಜಿಕ ನ್ಯಾಯ ವಿಲ್ಲದೆ ಸಮಾನತೆ ಎಂಬುದು ಮರೀಚಿಕೆ. ಹಾಗಾಗಿ ಈ ಎರಡು ವಿಷಯಗಳಲ್ಲಿ ದಸಂಸಕ್ಕೆ ಪ್ರಮುಖವಾಗಿದೆ.ಸಂವಿಧಾನದ ಆಧಾರದಲ್ಲಿ ಸಮಾಜಶಾಸ್ತಿçÃಯ ವಾಸ್ತವವನ್ನು ಮುಂದಿಟ್ಟುಕೊAಡು, ಈಗಿರುವ ಎಜೆ ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ದತ್ತಾಂಶಗಳ ಮೂಲಕ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಒಳಮೀಸಲಾತಿಯನ್ನು ಅನುಮಾನದಿಂದ ನೋಡುತ್ತಿರುವವರು, ಫಲಾನುಭವಿಗಳ ಗುಂಪು, ಹೊಲ, ಮಾದಿಗರ ವಿಘಟನೆ ಈ ಎಲ್ಲಾ ಸವಾಲುಗಳ ಮೆಟ್ಟಿನಿಂತು ಒಳಮೀಸಲಾತಿ ಜಾರಿಗೆ ತರಬೇಕಾದ ಸವಾಲು ನಮ್ಮ ಮುಂದಿದೆ ಎಂದರು.
ಘೋಷ್ಠಿಯ ಅಧ್ಯಕ್ಷತೆಯನ್ನು ದಸಂಸ ರಾಜ್ಯ ಸಮಿತಿ ಸದಸ್ಯ ರಮೇಶ್ ಡಾಕುಳಕಿ ವಹಿಸಿದ್ದರು.ಈ ವಿಚಾರವಾಗಿ ಸಿಂಗದಹಳ್ಳಿ ರಾಜಕುಮಾರ್, ರಂಗನಾಥ್ ಕೆ.ಜೆ.ಎಪ್,ಗುರುಪ್ರಸಾದ್ ಕಂಟಲಗೆರೆ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker