ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು
ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗಿದ್ದೀರಿ. ಇನ್ನು ಮುಂದೆ ಮನಃ ಪರಿವರ್ತನೆ ಮಾಡಿಕೊಂಡು ಸರಿ ದಾರಿಯಲ್ಲಿ ನಡೆದು ಸತ್ಪ್ರಜೆಗಳಾಗಬೇಕು ಎಂದು ಬುದ್ಧಿ ಮಾತುಗಳನ್ನು ಹೇಳಿದರು
ಜೈಲಿನಲ್ಲಿರುವ ಖೈದಿಗಳ ಕೊಠಡಿ, ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ಗುಣ ಮಟ್ಟವನ್ನು ಪರಿಶೀಲಿಸಿದರು
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಲೋಕಾಯುಕ್ತ ಅಧೀಕ್ಷಕ ಎ ವಿ ಲಕ್ಷ್ಮೀ ನಾರಾಯಣ, ಜೈಲಿನ ಅಧೀಕ್ಷಕ ಮಲ್ಲಿಕಾರ್ಜುನ ಎಸ್ ಮಾಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು