ತುಮಕೂರಿನಲ್ಲಿ ಜನವರಿ 18 ಹಾಗೂ19 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿರುವ ರಾಜ್ಯಮಟ್ಟದ
ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಗೊಳಿಸಿದರು.
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ರವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ರಾಜ್ಯಮಟ್ಟದ ಸಮ್ಮೇಳನಕ್ಕೆ ಆಗಮಿಸಬೇಕೆಂದು ಮುಖ್ಯಮಂತ್ರಿಗಳನ್ನು ಕೋರಿದರು. ಇದಕ್ಕೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದರು.
ಈ ವೇಳೆ ಕೆಯುಡಬ್ಯ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು, ಜಿಲ್ಲಾಧ್ಯಕ್ಷ ಚಿ. ನಿ. ಪುರುಷೋತ್ತಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ. ಇ. ರಘುರಾಮ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಡಿ. ಎಂ. ಸತೀಶ್, ಟಿ. ಎನ್. ಮಧುಕರ್, ಅನು ಶಾಂತರಾಜ್, ಕಾರ್ಯದರ್ಶಿ ಸತೀಶ್ ಹಾರೋಗೆರೆ, ನಿರ್ದೇಶಕರಾದ ಹೆಚ್.ಎಸ್. ಪರಮೇಶ್, ಯಶಸ್, ಹರೀಶ್ ಆಚಾರ್ಯ ಹಾಗೂ ಕೊರಟಗೆರೆ ತಾಲೂಕು ಘಟಕದ ಅಧ್ಯಕ್ಷ ಕೆ. ವಿ. ಪುರುಷೋತ್ತಮ್ ಹಾಜರಿದ್ದರು.