ಕ್ರೈಂ ನ್ಯೂಸ್ಜಿಲ್ಲೆತುಮಕೂರು
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು.

ತುಮಕೂರು : ತುಮಕೂರಿನ ಕ್ಯಾತ್ಸಂದ್ರ ಬಳಿ ದ್ಚಿಚಕ್ರ ವಾಹನ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ಸವಾರ ತುಮಕೂರು ತಾಲೂಕಿನ ಅಣ್ಣೇನಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬುವವರ ಮಗ ಅಕ್ಷಯ್ ( 22) ಎಂದು ತಿಳಿದು ಬಂದಿದೆ.
ಬೈಕ್ ಸವಾರ ಅಕ್ಷಯ್ ಪ್ರತಿದಿನ ಡಾಬಸ್ ಪೇಟೆಗೆ ಕೆಲಸಕ್ಕಾಗಿ ಒಡಾಡುತ್ತಿದ್ದನು. ಗುರುವಾರ ರಾತ್ರಿ ದುರಾದೃಷ್ಟವಶಾತ್ ಕೆಲಸ ಮುಗಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕೂಡಲೇ ವಿಷಯ ತಿಳಿದ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.