
ಇಂಡಿ : ಪ್ರತಿ ವರ್ಷ ಡಾ.ಬಿ.ರ್.ಅಂಬೇಡ್ಕರ್ ರವರ ಜಯಂತಿ ಸಮಯದಲ್ಲಿಯೇ ಚುನಾವಣೆಗಳು ಘೋಷಣೆಯಾಗುತ್ತಿದ್ದು, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅಂಬೇಡ್ಕರ್ ರವರ ಜಯಂತಿಯನ್ನು ರಾಜ್ಯ ಸರ್ಕಾರ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಅದ್ದೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಈ ಬಾರಿಯೂ ಸಹ ಜಿಲ್ಲಾ ಪಂಚಾಯತಿ,ತಾಲ್ಲೂಕು ಪಂಚಾಯತಿ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಏ.14 ಮುಗಿಯುವವರೆಗೂ ತಾ.ಪಂ.ಮತ್ತು ಜಿ.ಪಂ ಚುನಾವಣೆ ಘೋಷಣೆ ಮಾಡದಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಕ್ರಮ ಕೈಗೊಳ್ಳ ಬೇಕೆಂದು ರಾಜ್ಯ ಛಲವಾದಿ ನೌಕರರ ಸಂಘದ ರಾಜ್ಯಾಧ್ಯಕ್ಷ ಚಿದಾನಂದ ಕಾಂಬಳೆ ಮನವಿ ಮಾಡಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಈ ವಿಷಯ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಸಚಿವರು ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗೆ ಮನವಿ ಪತ್ರವನ್ನು ಅಂಚೆ ಮೂಲಕ ಕಳುಹಿಸಲಾಗಿದೆ.
ಬುದ್ಧ, ಬಸವ,ಅಂಬೇಡ್ಕರ್ ಚಿಂತನೆಯನ್ನು ಮೈಗೂಡಿಸಿಕೊಂಡು ಅವರ ಆದರ್ಶಗಳನ್ನು ಮಾದರಿಯಾಗಿಟ್ಟು ಕೊಂಡು ಆಡಳಿತ ನಡೆಸುತ್ತಿರುವ ಸಿ.ಎಂ. ಸಿದ್ದರಾಮಯ್ಯನವರು 2024ರಲ್ಲಿ ಭಾರತ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಿ ಜಾಗೃತಿ ಮೂಡಿಸಿದ ಘನ ಸರ್ಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಛಲವಾದಿ ನೌಕರರ ಸಂಘದ ರಾಜ್ಯ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.