ಪಾವಗಡ : ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ

ಪಾವಗಡ : ಯುಗಾದಿ ಹಬ್ಬದ ಹೊರ್ಸದಡುಕಿನ ದಿನ ಶುಕ್ರವಾರ ಸಂಜೆ ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಅವರು ಪಟ್ಟಣದ ಆಪ್ ಬಂಡೆ ಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ.
ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ
ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳ ಎಂದು ಉಲ್ಲೇಖಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿದ್ದಾರೆ
ಕಳೆದ 3 ವರ್ಷಗಳಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ್ ಇವರ ಸೇವಾ ಅವಧಿ ಮುಂದಿನ ಒಂದು ವಾರದಲ್ಲಿ ಮುಕ್ತಾಯವಾಗುತ್ತಿತ್ತು.
ಇವರು ಮೂಲತಃ ಪಾವಗಡ ತಾಲ್ಲೂಕಿನ ಗುಂಡರ್ಲಾಹಳ್ಳಿ ಗ್ರಾಮದವರಾಗಿದ್ದರು
ಸಾವಿಗೂ ಮುನ್ನ ಮಲ್ಲಿಕಾರ್ಜುನ್ ಕೊನೆ ಮಾತು
ನಮ್ಮ ತಾಯಿ ಹೆಂಡತಿ ಮಕ್ಕಳು ನಮ್ಮ ಇಡೀ ಸಂಸಾರ ನನ್ನ ಚೆನ್ನಾಗಿ ನೋಡಿಕೊಂಡಿದೆ, ನನಗೆ ಒಳ್ಳೆಯ ಬೆಲೆ ಕೊಟ್ಟಿದ್ದಾರೆ, ನಾನು ಅವರಿಗೆ ಇನ್ನು ಸಹಾಯ ಮಾಡಬೇಕಿತ್ತು ಆದ್ರೆ ಅದು ನನ್ನಿಂದ ಆಗಲಿಲ್ಲ
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ನನಗೆ ತೊಂದರೆ ಕೊಟ್ಟಿರುವುದರಿಂದ ನಾನು ಈ ನಿರ್ಧಾರಕ್ಕೆ ಬಂದಿರುವೆನು, ಅವರಿಗೆ ದೇವರೇ ಶಿಕ್ಷೆ ನೀಡುತ್ತಾನೆ,
ನಮ್ಮ ಕುಟುಂಬದವರು ಏನು ಸೇಡಿ ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲ, ದೇವರೇ ಅವರಿಗೆ ಕಾನೂನು ಶಿಕ್ಷೆ ಕೊಟ್ಟೆ ಕೊಡುತ್ತಾನೆ ಎಂದು ವಿಡಿಯೋ ಮಾಡಿ ಹೇಳಿದ್ದಾರೆ.
ಮಲ್ಲಿಕಾರ್ಜುನ್ ಸಾವಿಗೆ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಪಾವಗಡ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



