ಗುಬ್ಬಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಪ್ರಾಣಪಾಯದಿಂದ ಜಸ್ಟ್ ಮಿಸ್.!

ಗುಬ್ಬಿ : ಸಮೀಪದ ಎಂ.ಹೆಚ್ ಪಟ್ಟಣ ಗೇಟ್ ಬಳಿ ಕೆ.ಎಸ್.ಆರ್. ಟಿ.ಸಿ ಬಸ್ ಪಲ್ಟಿಯಾಗಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೆ ಪ್ರಾಣಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ 11 ಗಂಟೆ ಸಮಯಯಲ್ಲಿ ನಡೆದಿದೆ.
ತಿಪಟೂರು ಡಿಪೋಗೆ ಸೇರಿದ ಹೊಸದುರ್ಗ ಮತ್ತು ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಕೆ. ಎಸ್ ಆರ್ ಟಿಸಿ ಬಸ್ ಗುಬ್ಬಿ ಕಡೆಯಿಂದ ತುಮಕೂರು ಮಾರ್ಗವಾಗಿ ಚಲಿಸುತ್ತಿದ ವೇಳೆ ಬಸ್ ನ ಅಕ್ಸೆಲ್ ರಾಡ್ ಕಟ್ಟಾಗಿ ಬಸ್ ನಿಯಂತ್ರಣ ಕಳೆದುಕೊಂಡುರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ತಕ್ಷಣ ಸ್ಪಂದಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು . ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.
ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸಮೀಪದ ಗುಬ್ಬಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಬಸ್ ಪಲ್ಟಿಯಾದ ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ನಂತರ ಪೊಲೀಸರು ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು.



