ದೇಶ Archives » ಸುವರ್ಣ ಪ್ರಗತಿ https://suvarnapragathi.in/archives/category/nation ಕನ್ನಡ ದಿನ ಪತ್ರಿಕೆ Thu, 26 Dec 2024 18:01:49 +0000 en-US hourly 1 https://wordpress.org/?v=7.0 https://suvarnapragathi.in/wp-content/uploads/2021/08/cropped-suvarna-pragathi-logo-2-32x32.png ದೇಶ Archives » ಸುವರ್ಣ ಪ್ರಗತಿ https://suvarnapragathi.in/archives/category/nation 32 32 ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ https://suvarnapragathi.in/archives/7881 Thu, 26 Dec 2024 18:01:49 +0000 https://suvarnapragathi.in/?p=7881  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಡಾ.ಮನಮೋಹನ್ ಸಿಂಗ್ ರಾಜಕೀಯ ಜೀವನ 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು …

The post ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ appeared first on ಸುವರ್ಣ ಪ್ರಗತಿ.

]]>
 ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.

ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.

ಡಾ.ಮನಮೋಹನ್ ಸಿಂಗ್ ರಾಜಕೀಯ ಜೀವನ

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.

ಸಿಂಗ್ ಅವರ ರಾಜಕೀಯ ಜೀವನು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.

1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.

6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.

ಅಸ್ಸಾಂ ನಿಂದ 5 ಬಾರಿ ಹಾಗೂ ಅಲ್ಪಾವಧಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು.

RBI ಗವರ್ನರ್ ಆಗಿ ಸೇವೆ ಸಲ್ಲಿಸಿದ್ದ ಮನಮೋಹನ್ ಸಿಂಗ್

1932 ರ ಸೆ.26 ರಂದು ಅಂದಿನ ಅವಿಭಜಿತ ಭಾರತದಲ್ಲಿ ಜನಿಸಿದ ಡಾ. ಮನಮೋಹನ್ ಸಿಂಗ್, 1972 ರಲ್ಲಿ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ 1982-1985 ಅವಧಿಯಲ್ಲಿ ಆರ್ ಬಿಐ ಗವರ್ನರ್ ಆಗಿಯೂ ಕಾರ್ಯನಿರ್ವಹಿಸಿದ್ದರು.

ಅಸಾಧಾರಣ ಶೈಕ್ಷಣಿಕ ಹಿನ್ನೆಲೆಯೊಂದಿಗೆ, ಸಿಂಗ್ BA ಮತ್ತು MA ಎರಡರಲ್ಲೂ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಗ್ರಸ್ಥಾನ ಪಡೆದಿದ್ದರು. ಕೇಂಬ್ರಿಡ್ಜ್‌ನಲ್ಲಿ ಹೆಚ್ಚಿನ ಅಧ್ಯಯನವನ್ನು ಪಡೆದ ಅವರು, ಆಕ್ಸ್‌ಫರ್ಡ್‌ನಿಂದ ಡಾಕ್ಟರೇಟ್ ಪದವಿ ಗಳಿಸಿದರು. ಹಣಕಾಸು ಸಚಿವರಾಗಿ, ಅವರು ಭಾರತವನ್ನು ಖಾಸಗೀಕರಣ, ಉದಾರೀಕರಣ ಮತ್ತು ಜಾಗತೀಕರಣದತ್ತ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಂಸೆ ಗಳಿಸಿದ್ದರು. ಇನ್ನೊಂದು ಸದನದಲ್ಲಿ ಮತದಾನದ ವೇಳೆ ಎದುರಾಳಿಗಳು ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ’ ಎಂದು ಮೋದಿ ನೆನಪಿಸಿಕೊಂಡಿದ್ದು ಗಮನಾರ್ಹ

ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿ.ಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

The post ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ appeared first on ಸುವರ್ಣ ಪ್ರಗತಿ.

]]>
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೋದಿ ನೇತೃತ್ವದ ಅಭಿವೃದ್ಧಿಗೆ ಮನ್ನಣೆ : ಶಾಸಕ ಬಿ. ಸುರೇಶಗೌಡ https://suvarnapragathi.in/archives/7097 Sun, 03 Dec 2023 13:22:48 +0000 https://suvarnapragathi.in/?p=7097 ತುಮಕೂರು : ಮಧ್ಯಪ್ರದೇಶ, ರಾಜಸ್ತಾನ,ತೆಲಂಗಾಣ ಮತ್ತು ಛತ್ತೀಸಗಡ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಫಲಿತಾಂಶ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಬಲ ನಾಯಕತ್ವಕ್ಕೆ ಮತ್ತು ಅವರ ನೇತೃತ್ವದ ಅಭಿವೃದ್ಧಿ ಯೋಜನೆಗಳಿಗೆ ಕೊಟ್ಟ ಜನಾದೇಶವಾಗಿದೆ. ಈ ಫಲಿತಾಂಶದ ಮೂಲಕ ಜನರು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿದ್ದಾರೆ ಎಂದು ಶಾಸಕ ಬಿ. ಸುರೇಶಗೌಡ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಇಡೀ ದೇಶದಾದ್ಯಂತ ಸಾಧಿಸಲಿರುವ ದಿಗ್ವಿಜಯಕ್ಕೆ ಇದು …

The post ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೋದಿ ನೇತೃತ್ವದ ಅಭಿವೃದ್ಧಿಗೆ ಮನ್ನಣೆ : ಶಾಸಕ ಬಿ. ಸುರೇಶಗೌಡ appeared first on ಸುವರ್ಣ ಪ್ರಗತಿ.

]]>
ತುಮಕೂರು : ಮಧ್ಯಪ್ರದೇಶ, ರಾಜಸ್ತಾನ,ತೆಲಂಗಾಣ ಮತ್ತು ಛತ್ತೀಸಗಡ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಫಲಿತಾಂಶ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಬಲ ನಾಯಕತ್ವಕ್ಕೆ ಮತ್ತು ಅವರ ನೇತೃತ್ವದ ಅಭಿವೃದ್ಧಿ ಯೋಜನೆಗಳಿಗೆ ಕೊಟ್ಟ ಜನಾದೇಶವಾಗಿದೆ. ಈ ಫಲಿತಾಂಶದ ಮೂಲಕ ಜನರು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿದ್ದಾರೆ ಎಂದು ಶಾಸಕ ಬಿ. ಸುರೇಶಗೌಡ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಇಡೀ ದೇಶದಾದ್ಯಂತ ಸಾಧಿಸಲಿರುವ ದಿಗ್ವಿಜಯಕ್ಕೆ ಇದು ಮುನ್ನುಡಿಯಂತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದಿದೆ. ರಾಜಸ್ತಾನ ಮತ್ತು ಛತ್ತೀಸಗಡದಲ್ಲಿ ಜನರು ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಬಿಜೆಪಿಗೆ ಮರಳಿ ಅಧಿಕಾರ ಕೊಟ್ಟಿದ್ದಾರೆ. ಅಂದರೆ ಇದು ಬಿಜೆಪಿಗೆ ಸಿಕ್ಕ ಸಕಾರಾತ್ಮಕ ಜಯವಾಗಿದೆ ಮತ್ತು ಇದುವರೆಗೆ ಕಾಂಗ್ರೆಸ್‌ ಪಕ್ಷ ಮಾಡಿಕೊಂಡಿರುವ ಬಂದಿರುವ ನಕಾರಾತ್ಮಕ ರಾಜಕಾರಣವನ್ನು ಜನರು ಧಿಕ್ಕರಿಸಿರುವುದರ ದ್ಯೋತಕವಾಗಿದೆ.
ಭಾರತ ದೇಶವನ್ನು ಜಾಗತಿಕ ಐದು ಬಲಿಷ್ಠ ಆರ್ಥಿಕತೆಗಳಲ್ಲಿ ಒಂದಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಕೀರ್ತಿಯನ್ನು ಪ್ರಪಂಚದ ಬಲಿಷ್ಠ ರಾಷ್ಟ್ರಗಳ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರ ಜತೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಕೈ ಜೋಡಿಸಿ ರೂಪಿಸಿದ ಚುನಾವಣಾ ಕಾರ್ಯತಂತ್ರ ಕಾಂಗ್ರೆಸ್‌ ಮಾತ್ರವಲ್ಲ ಇತರ ಎಲ್ಲ ವಿರೋಧ ಪಕ್ಷಗಳಿಗೆ ಮರ್ಮಾಘಾತ ಕೊಟ್ಟಿದೆ.
ಕಾಂಗ್ರೆಸ್‌ ಪಕ್ಷವು ಕೊಟ್ಟ ಸುಳ್ಳು ಗ್ಯಾರಂಟಿ ಯೋಜನೆಗಳಿಗೆ ಜನರು ಮರುಳಾಗಲಿಲ್ಲ. ದೇಶದ ಅಭಿವೃದ್ಧಿ ಮುಖ್ಯ, ದುಡಿಯುವ ಕೈಗಳಿಗೆ ಕೆಲಸ ಮುಖ್ಯ ಎಂಬುದನ್ನು ಅವರು ಈ ಫಲಿತಾಂಶದ ಮೂಲಕ ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳಿಗೆ ಸಾರಿ ಹೇಳಿದ್ದಾರೆ.
ಕಾಂಗ್ರೆಸ್‌ನ ನಾಯಕರಾದ ರಾಹುಲ್‌ ಗಾಂಧಿಯವರು ಚುನಾವಣಾ ಸಮಯದಲ್ಲಿ ಪ್ರಧಾನಿಯವರ ವಿರುದ್ಧ ʻದುರದೃಷ್ಟ (ಪನೌತಿ)ʼ ಎಂಬ ಹೊಣೆಗೇಡಿತನದ ಟೀಕೆ ಮಾಡಿದ್ದರು. ಈಗ ಸ್ವತಃ ರಾಹುಲ್‌ ಗಾಂಧಿಯವರು ತಮ್ಮ ಪಕ್ಷಕ್ಕೆ ಎಂಥ ʼದುರದೃಷ್ಟʼ ಎಂಬುದು ಸಾಬೀತಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ವೈಯಕ್ತಿಕ ಮತ್ತು ನಿರಾಧಾರದ ಆರೋಪಗಳನ್ನು ಜನರು ಸಹಿಸುವುದಿಲ್ಲ ಎಂದು ಇನ್ನಾದರೂ ಕೇಂದ್ರದ ಮತ್ತು ರಾಜ್ಯದ ಕಾಂಗ್ರೆಸ್‌ ನಾಯಕರು ಅರ್ಥ ಮಾಡಿಕೊಳ್ಳಬೇಕು.
ರಾಜಸ್ಥಾನ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಒಳಜಗಳ, ಅಧಿಕಾರಕ್ಕಾಗಿ ನಡೆದ ಕಚ್ಚಾಟ ಆ ಪಕ್ಷಕ್ಕೆ ಮುಳುವಾಗಿದೆ. ಇಲ್ಲಿಯೂ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಅದೇ ಮುಸುಕಿನ ಗುದ್ದಾಟ ನಡೆದಿದೆ. ಅದು ಅವರ ಪಕ್ಷಕ್ಕೆ ಮುಳುವಾಗಲಿದೆ.ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತವು ಜನರನ್ನು ಭ್ರಮ ನಿರಸನದಲ್ಲಿ ಮುಳುಗಿಸಿದೆ. ಯಾಕಾದರೂ ನಾವು ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದೆವು ಎಂದು ಪರಿತಾಪ ಪಡುತ್ತಿದ್ದಾರೆ. ಅವರ ಸಿಟ್ಟು ಮತ್ತು ಆಕ್ರೋಶ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವ್ಯಕ್ತವಾಗಲಿದೆ. ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸಗಡ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ಹೊಸ ಹುರುಪನ್ನು ಮತ್ತು ಹುಮ್ಮಸ್ಸನ್ನು ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಾದಿಯಾಗಿ ಎಲ್ಲ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕರ್ನಾಟಕದ ಎಲ್ಲ ಇಪ್ಪತ್ತೆಂಟು ಸೀಟುಗಳಲ್ಲಿ ಕಾಂಗ್ರೆಸ್‌ ಅನ್ನು ಪರಾಜಯಗೊಳಿಸಿ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

The post ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೋದಿ ನೇತೃತ್ವದ ಅಭಿವೃದ್ಧಿಗೆ ಮನ್ನಣೆ : ಶಾಸಕ ಬಿ. ಸುರೇಶಗೌಡ appeared first on ಸುವರ್ಣ ಪ್ರಗತಿ.

]]>
ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನನ್ನು ಬಲಿ ಪಶು ಮಾಡಿದರು : ಹೆಚ್.ಡಿ.ದೇವೇಗೌಡ https://suvarnapragathi.in/archives/6174 Mon, 24 Apr 2023 14:50:10 +0000 https://suvarnapragathi.in/?p=6174 ಮಧುಗಿರಿ : ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ತುಮಕೂರಿನಿಂದ ನಿಲ್ಲಲು ಬಯಸಿದವನಲ್ಲ. ರಾಜಕೀಯ ನಿವೃತ್ತಿ ಘೋಷಿಸಲು ಬಯಸಿದ್ದೆ, ಆದರೆ ಜಿಲ್ಲೆಯ ಕೆಲ ಮುಖಂಡರು ಚುನಾವಣೆಗೆ ನಿಲ್ಲಿಸಿ ನನ್ನನ್ನು ಬಲಿ ಪಶು ಮಾಡಿದರು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದರು. ತಾಲೂಕಿನ ದೊಡ್ಡೇರಿ ಹೋಬಳಿಯ ಡಿ ಕೈಮರ ಗ್ರಾಮದ ಶಾಸಕ ವೀರಭದ್ರಯ್ಯನವರ ಸಮೀಪ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ಯರ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಲೋಕಸಭೆಯಿಂದ ಸ್ಪರ್ಧಿಸಬೇಕೆಂದು ನಾನು ಎಂದೂ ಅಂದುಕೊಂಡವನಲ್ಲಾ. ನನಗೆ ಮಂಡಿನೋವಿದೆ, ಎದ್ದು ನಿಲ್ಲೋಕೆ ಕಷ್ಟ …

The post ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನನ್ನು ಬಲಿ ಪಶು ಮಾಡಿದರು : ಹೆಚ್.ಡಿ.ದೇವೇಗೌಡ appeared first on ಸುವರ್ಣ ಪ್ರಗತಿ.

]]>
ಮಧುಗಿರಿ : ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ತುಮಕೂರಿನಿಂದ ನಿಲ್ಲಲು ಬಯಸಿದವನಲ್ಲ. ರಾಜಕೀಯ ನಿವೃತ್ತಿ ಘೋಷಿಸಲು ಬಯಸಿದ್ದೆ, ಆದರೆ ಜಿಲ್ಲೆಯ ಕೆಲ ಮುಖಂಡರು ಚುನಾವಣೆಗೆ ನಿಲ್ಲಿಸಿ ನನ್ನನ್ನು ಬಲಿ ಪಶು ಮಾಡಿದರು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದರು.

ತಾಲೂಕಿನ ದೊಡ್ಡೇರಿ ಹೋಬಳಿಯ ಡಿ ಕೈಮರ ಗ್ರಾಮದ ಶಾಸಕ ವೀರಭದ್ರಯ್ಯನವರ ಸಮೀಪ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ಯರ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಲೋಕಸಭೆಯಿಂದ ಸ್ಪರ್ಧಿಸಬೇಕೆಂದು ನಾನು ಎಂದೂ ಅಂದುಕೊಂಡವನಲ್ಲಾ. ನನಗೆ ಮಂಡಿನೋವಿದೆ, ಎದ್ದು ನಿಲ್ಲೋಕೆ ಕಷ್ಟ ಆಗುತ್ತೆ. ಚುನಾವಣಾ ರಾಜಕೀಯ ಸಾಕಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆ. ಆದರೇ ತುಮಕೂರಿನ ಕೆಲ ಮುಖಂಡರು ನನ್ನನ್ನ ಬಲಿಪಶು ಮಾಡಿದ್ರು ಎಂದು ಹೇಳಿ ನಾನು ಯಾರ ಮನಸ್ಸನ್ನು ನೋಯಿಸುವುದಿಲ್ಲ. ನಾನು ಹಿಂದೆಯದ್ದನ್ನ ಮೆಲುಕು ಹಾಕಿ ನೋಡೋಕು ಹೋಗೋದಿಲ್ಲಾ. ಕಾಂಗ್ರೆಸ್ ನವರು ಜೆಡಿಎಸ್ ಗೆ ಕೇವಲ 20 ಸ್ಥಾನಗಳು ಮಾತ್ರ ಬರುತ್ತದೆ ಎಂದು ಹೇಳುತ್ತಿದ್ದು, ಬಹುಶಃ ಮಧುಗಿರಿ ಒಂದೇ ಸಾಕು ಕಾಂಗ್ರೆಸ್ ನಾಯಕರಿಗೆ ಉತ್ತರ ಕೊಡೋಕೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ದ ಹರಿಹಾಯ್ದರು.

ಈ ಹಿಂದೆ ನಾನು ಸಿಎಂ ಆಗುವ ಸಂದರ್ಭದಲ್ಲಿ ತುಮಕೂರಿನಲ್ಲಿ 9 ಕ್ಷೇತ್ರಗಳನ್ನು ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಈ ಬಾರಿಯ ಚುನಾವಣೆಯಲ್ಲೂ ಮತದಾರರು ಅದೇ ಫಲಿತಾಂಶವನ್ನು ನೀಡಬೇಕು. ಕುಮಾರಣ್ಣ ನಿಮ್ಮ ಮೇಲೆ ವಿಶ್ವಾಸ ವಿಟ್ಟಿದ್ದು, ಅವರು ರಾಜ್ಯದ ಅಭಿವೃದ್ಧಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಕೊಟ್ಟ ಮಾತಿನಂತೆ ನಡೆಯುತ್ತಾರೆ ಆದ್ದರಿಂದ ಈ ಬಾರಿ ಕುಮಾರಣ್ಣನಿಗೆ ಶಕ್ತಿ ತುಂಬಿ ಎಂದು ಕರೆ ನೀಡಿದರು.

ಶಾಸಕ ಎಂ.ವಿ. ವೀರಭದ್ರಯ್ಯನವರು ಮಧುಗಿರಿ ಕಂದಾಯ ಜಿಲ್ಲೆಯನ್ನಾಗಿ ಮಾಡಬೇಕು. ಏಕಶಿಲಾ ಬೆಟ್ಟಕೆ ರೋಪ್ ವೇ ಅಳವಡಿಸಬೇಕು ತಾಲೂಕಿನಲ್ಲಿ ಇಂಡಸ್ಟ್ರಿಯಲ್ ಕ್ಲಸ್ಟರ್ ಮಾಡಬೇಕು ಎಂಬ ಕನಸು ಹೊಂದಿದ್ದು, ಅವರನ್ನು ಹೆಚ್ಚಿನ‌ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ಜಿಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ ಬಿಜೆಪಿಯಿಂದಾಗಿ ಕರ್ನಾಟಕದ ಗೌರವವಿಲ್ಲದಂತಾಗಿದ್ದು, ಅವರು ಯಡಿಯೂರಪ್ಪನನ್ನು ಮುಗಿಸಿದ್ದಾರೆ. ರಾಜ್ಯದ 7 ಕೋಟಿ ಜನತೆಯ ಕಲ್ಯಾಣಕ್ಕಾಗಿ ಜೆಡಿಎಸ್ ಬೆಂಬಲಿಸಿ ಎಂದು ಮನವಿ ಮಾಡಿದರು.

ಹಿಂದುಳಿದವರಿಗೆ ಮೀಸಲಾತಿ ಕೊಟ್ಟವರು ಕೆಂಪೇಗೌಡನ ಮಗ ದೇವೇಗೌಡ. ಇಂತಹ ದೇವೇಗೌಡರನ್ನು ಕಾಂಗ್ರೆಸ್ ನವರು ಇಳಿ ವಯಸ್ಸಿನಲ್ಲಿ ತುಮಕೂರಿನಿಂದ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿ ಅನ್ನದಲ್ಲಿ ವಿಷ ಹಾಕುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸಾದನೆ ಏನು ಎಂದ ಅವರು ಅವರು ಸಿಡಿಯಲ್ಲಿರುವ ಮಂತ್ರಿಗಳಿಗೆ ಇವತ್ತು ಟಿಕೆಟ್ ಕೊಟ್ಟಿದ್ದಾರೆ. ಇಂತಹ ಅಪವಿತ್ರರು ರಾಜ್ಯದಲ್ಲಿದ್ದರೆ ಮಳೆಯಾಗುತ್ತಾ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಒಬ್ಬಂಟಿಯಾಗಿದ್ದು, ಅವರ ಕೈಯಲ್ಲಿ ಏನು ಆಗುತ್ತದೆ ಎಂದು ಕೆಲವರು ಕೇಳುತ್ತಿದ್ದು, 50 ಆಕಳು ಕಟ್ಟಿದರೂ ಅಲ್ಲಿ ಒಂದೇ ಹೋರಿ ಕಟ್ಟುವುದು ಎಂಬುದನ್ನು ಅವರು ಅರಿಯಬೇಕು ಎಂದು ಸಮಾವೇಶದಲ್ಲಿ ನಗೆ ಚಟಾಕಿ ಹಾರಿಸಿದರು.

ಶಾಸಕ ಎಂ.ವಿ. ವೀರಭದ್ರಯ್ಯ ‌ಮಾತನಾಡಿ ಕಳೆದ 5 ವರ್ಷಗಳಲ್ಲಿ ಪ್ರಕೃತಿ ನಮ್ಮ ಪರವಾಗಿ ಇರಲಿಲ್ಲ. ಆರಂಭದಲ್ಲಿ ಬೀಕರ ಬರಗಾಲ ಆವರಿಸಿತ್ತು ಈ ಸಂದರ್ಭದಲ್ಲಿ ತಾಲೂಕಿನಾದ್ಯಂತ 300 ಬೋರ್ ವೆಲ್ ಗಳನ್ನು ಕೊರೆಸಲಾಗಿತ್ತು. 6.70 ಕೋಟಿ ಅನುದಾನ ತಂದು ತಾಲೂಕಿನಲ್ಲಿ ಮೇವು ಬ್ಯಾಂಕ್ ಆರಂಭಿಸಿ ರೈತರ ನೆರವಿಗೆ ದಾವಿಸಲಾಗಿತ್ತು. 2 ವರ್ಷ ಕರೋನಾ ಆವರಿಸಿ ಕಾಮಗಾರಿ ಕುಂಟಿತಗೊಂಡಿತ್ತು. ಬಿಜೆಪಿ ಸರ್ಕಾರದಲ್ಲಿ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎಂಬಂತಹ ಪರಿಸ್ಥಿತಿ ಇದ್ದರೂ
1143 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ.
ಈಗಾಗಲೇ ಮಧುಗಿರಿ ಉಪವಿಭಾಗವಾಗಿದ್ದು, ಮಧುಗಿರಿ ಜಿಲ್ಲೆಯದಾಗ ಮಾತ್ರ ಕ್ಷೇತ್ರ ಅಭಿವೃದ್ಧಿ ಸಾದ್ಯ. ಮಧುಗಿರಿಯ ಏಕಶಿಲಾ ಬೆಟ್ಟ ದೊಡ್ಡ ಸಂಪತ್ತು ಇದನ್ನು ಉಪಯೋಗಿಸುವಲ್ಲಿ ಸರ್ಕಾರ ಎಡವಿದೆ. ಈ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸಿದ್ದಲ್ಲಿ ಆರ್ಥಿಕ ಚಟುವಟಿಕೆ ಸಾದ್ಯವಾಗಲಿದೆ. ಕ್ಷೇತ್ರದಲ್ಲಿ ಇಂಡಸ್ಟ್ರಿಯಲ್ ಕ್ಲಸ್ಟರ್ ಆದಲ್ಲಿ ನಿರುದ್ಯೋಗ ದೂರಾಗಲಿದ್ದು, ಯುವಕರಿಗೆ ಕೆಲಸ ದೊರೆಯಲಿದೆ.
ಎತ್ತಿನಹೊಳೆ ಕಾಮಗಾರಿ ಕುಂಟುತ್ತಾ ಸಾಗಿದ್ದು, ಕಾಮಗಾರಿ ತ್ವರಿತಗೊಳಿಸಿದಲ್ಲಿ ಕೆರೆಗಳಿಗೆ ನೀರು ಹರಿಯಲಿದ್ದು, ಈ ಬಾರಿ ನನ್ನನ್ನು ಗೆಲ್ಲಿಸಿ ಜೆಡಿಎಸ್ ಗೆ ಆಶೀರ್ವದಿಸಿದಲ್ಲಿ ಕುಮಾರ ಸ್ವಾಮಿ ಸಿಎಂ ಆಗಲಿದ್ದು, ಅವರು ಸಿಎಂ ಆದರೆ ಮಧುಗಿರಿ ಯ ಭಾಗ್ಯದ ಬಾಗಿಲು ತೆರೆಯಲಿದೆ ಎಂದರು.

(ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ವೀರಭದ್ರಯ್ಯನವರಿಗೆ 18 ಸಾವಿರ ಮತಗಳು ಬಂದಿದ್ದು, ಆದರೆ ಇದೇ ಮತಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಯಾಕೆ ಬಂದಿಲ್ಲ..! ಅದಕ್ಕೆ ಕಾರಣ ಯಾರು ಎಂಬುದು ನನಗೆ ಗೊತ್ತು. ನನ್ನ ಕಣ್ಣೀರಿಗೆ ಕಾರಣರಾದವರನ್ನು ಕ್ಷೇತ್ರದ ಜನತೆ ಕಣ್ಣೀರು ಹಾಕಿಸಿದಾಗ ಮಾತ್ರ ನನ್ನ ಆತ್ಮಕ್ಕೆ ಶಾಂತಿ ದೊರೆಯಲಿದೆ ಎಂದು ಪರೋಕ್ಷವಾಗಿ ಕೆ.ಎನ್. ರಾಜಣ್ಣರ ವಿರುದ್ದ ಗುಡುಗಿದ ದೇವೇಗೌಡರು ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದರು.)

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾದ್ಯಕ್ಷ ಅರ್ ಸಿ ಅಂಜಿನಪ್ಪ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಹಲಿಂಗಯ್ಯ, ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್, ಪುರಸಭಾ ಅಧ್ಯಕ್ಷ ತಿಮ್ಮರಾಜು,
ಸದಸ್ಯರಾದ ಎಂ. ಅರ್ ಜಗನ್ನಾಥ್, ಎಂ. ಎಲ್ ಗಂಗರಾಜು, ಚಂದ್ರಶೇಖರ್ ಬಾಬು, ಮುಖಂಡರಾದ ತಿಮ್ಮೆಗೌಡ, ಬಸವರಾಜು, ಕಂಭತ್ತನಹಳ್ಳಿ ರಘು, ವೆಂಕಟಾಪುರ ಗೋವಿಂದರಾಜು, ಪಾವಗಡ ಶ್ರೀರಾಮ್, ಎಸ್.ಡಿ. ಕೃಷ್ಣಪ್ಪ, ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಅರ್.ಲಕ್ಷ್ಮಮ್ಮ ಇತರರಿದ್ದರು.

The post ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನನ್ನು ಬಲಿ ಪಶು ಮಾಡಿದರು : ಹೆಚ್.ಡಿ.ದೇವೇಗೌಡ appeared first on ಸುವರ್ಣ ಪ್ರಗತಿ.

]]>
ಮಾರ್ಚ್ 5ರಂದು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಂದ ಕಾಂಗ್ರೆಸ್ ಭವನ ಉದ್ಘಾಟನೆ : ಡಾ.ಜಿ.ಪರಮೇಶ್ವರ್ https://suvarnapragathi.in/archives/5867 Thu, 23 Feb 2023 17:06:19 +0000 https://suvarnapragathi.in/?p=5867 ಕೊರಟಗೆರೆ : ಮಾರ್ಚ್ 5 ರ ಭಾನುವಾರದಂದು ಕೊರಟಗೆರೆ ಪಟ್ಟಣದಲ್ಲಿ ನೂತನ ಕಾಂಗ್ರೆಸ್ ಭವನ ಉದ್ಘಾಟನೆ ಮತ್ತು ಜಿಲ್ಲಾ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೋಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಅವರು ಪಟ್ಟಣದ ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಪಟ್ಟಣದ ನೂತನ ಕಾಂಗ್ರೆಸ್ ಭವನವನ್ನುರಾಷ್ಟೀಯ ಕಾಂಗ್ರೆಸ್‌ ಅದ್ಯಕ್ಷರಾದ ಮಲ್ಲಿಕಾರ್ಜುನಖರ್ಗೆರವರು ಉದ್ಘಾಟಿಸುವರು, ಕೆಪಿಸಿಸಿ ಅದ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಎ.ಐ.ಸಿ.ಸಿ ವೀಕ್ಷರಾದ ಸುರ್ಜಿವಾಲ, ರಾಜ್ಯ ಪ್ರಚಾರಸಮಿತಿ …

The post ಮಾರ್ಚ್ 5ರಂದು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಂದ ಕಾಂಗ್ರೆಸ್ ಭವನ ಉದ್ಘಾಟನೆ : ಡಾ.ಜಿ.ಪರಮೇಶ್ವರ್ appeared first on ಸುವರ್ಣ ಪ್ರಗತಿ.

]]>
ಕೊರಟಗೆರೆ : ಮಾರ್ಚ್ 5 ರ ಭಾನುವಾರದಂದು ಕೊರಟಗೆರೆ ಪಟ್ಟಣದಲ್ಲಿ ನೂತನ ಕಾಂಗ್ರೆಸ್ ಭವನ ಉದ್ಘಾಟನೆ ಮತ್ತು ಜಿಲ್ಲಾ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೋಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.
ಅವರು ಪಟ್ಟಣದ ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಪಟ್ಟಣದ ನೂತನ ಕಾಂಗ್ರೆಸ್ ಭವನವನ್ನುರಾಷ್ಟೀಯ ಕಾಂಗ್ರೆಸ್‌ ಅದ್ಯಕ್ಷರಾದ ಮಲ್ಲಿಕಾರ್ಜುನಖರ್ಗೆರವರು ಉದ್ಘಾಟಿಸುವರು, ಕೆಪಿಸಿಸಿ ಅದ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಎ.ಐ.ಸಿ.ಸಿ ವೀಕ್ಷರಾದ ಸುರ್ಜಿವಾಲ, ರಾಜ್ಯ ಪ್ರಚಾರಸಮಿತಿ ಅದ್ಯಕ್ಷ ಎಂ.ಬಿ.ಪಾಟೀಲ್, ಸಲೀಂಅಹಮದ್, ಸೇರಿದಂತೆ ರಾಜ್ಯ ನಾಯಕರುಗಳು ಹಾಗೂ ಪಕ್ಷದ ಜಿಲ್ಲೆಯ ಎಲ್ಲಾ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಸುಮಾರು ಈ ಸಮಾವೇಶಕ್ಕೆ 50 ಸಾವಿರಜನರು ಸೇರುವ ನಿರೀಕ್ಷೆ ಇದ್ದು ಕಾರ್ಯಕ್ರಮವನ್ನು ಭವನ ಮುಂಭಾಗದ ಜಾಗದಲ್ಲಿ ನೆಡೆಸಲಾಗುವುದು, ಸುಮಾರು 1.50 ಕೋಟಿರೂನಲ್ಲಿ ನಿರ್ಮಾಣವಾಗಿರುವ ಕಾಂಗ್ರೆಸ್ ಭವನ ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದು ಈ ಕಟ್ಟಡ ನಿರ್ಮಾಣಕ್ಕೆ ಹಲವಾರು ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ, ಭವನ ನಿರ್ಮಾಣಕ್ಕೆ ನಿವೇಷನವನ್ನು ಉಚಿತವಾಗಿ ಧಾನ ಮಾಡಿರುವ ಪಟ್ಟಣದ ಉದ್ಯಮಿ ಹೆಚ್.ಮಹದೇವ್‌ರವರಿಗೆ ವಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಧನ್ಯವಾದ ತಿಳಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದ ಮೇಲೆ ಆಧಿಕಾರಕ್ಕೆ ಬರಲಿದೆ, ಇದು ನಮ್ಮಜನಧ್ವನಿ ಯಾತ್ರೆಗೆ ಜನರ ಸ್ಪಂದನೆಯಲ್ಲಿ ಜನರ ವಿಶ್ವಾಸ ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಡವಾಗಿದೆ ನಮ್ಮ ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ, ಅತಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದರು. ದಲಿತ ಮುಖ್ಯಮಂತ್ತಿ ಕೂಗು ಕೇಳಲಾದ ಪ್ರಶ್ನೆಗೆ ಪಕ್ಷದಲ್ಲಿ ಆ ರೀತಿ ಇಲ್ಲ, ನಮ್ಮ ಹೈಕಮಾಂಡ್ ನಿರ್ಣಯದಂತೆ ಮುಖ್ಯಮಂತ್ರಿಯಾಗುತ್ತಾರೆ. ಈ ಬಾರಿಯ ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸಾಮಾನ್ಯಜನರ, ಬಡವರ, ರೈತರ, ಮಹಿಳೆಯರ, ಕಾರ್ಮಿಕರ, ಯುವಕರ ಪರವಾಗಿದೆ ಎಂದು ಹೇಳಿದರು.

 

The post ಮಾರ್ಚ್ 5ರಂದು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಂದ ಕಾಂಗ್ರೆಸ್ ಭವನ ಉದ್ಘಾಟನೆ : ಡಾ.ಜಿ.ಪರಮೇಶ್ವರ್ appeared first on ಸುವರ್ಣ ಪ್ರಗತಿ.

]]>
ಕೃಷಿ ಮತ್ತು ಕೈಗಾರಿಕೆ ದೇಶದ ಎರಡು ಕಣ್ಣುಗಳಿದ್ದಂತೆ : ಶ್ರೀ ಸಿದ್ದಲಿಂಗಸ್ವಾಮಿಜೀ https://suvarnapragathi.in/archives/5838 Thu, 23 Feb 2023 03:15:54 +0000 https://suvarnapragathi.in/?p=5838 ತುಮಕೂರು : ಕಳೆದ 15 ದಿನಗಳಿಂದ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಇಂದು ಮುಕ್ತಾಯಗೊಂಡಿದ್ದು, ಕೇಷಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ರೇಷ್ಮೆ ಇಲಾಖೆ ಕ್ರಮವಾಗಿ ಮೊದಲ ಮೂರು ಪಾರಿತೋಷಕಗಳನ್ನು ಪಡೆದುಕೊಂಡಿವೆ. ಸರಕಾರದ 19,ಖಾಸಗಿ 05 ಕಂಪನಿಗಳು ತಮ್ಮಮಳಿಗೆ ತರೆದು ವಸ್ತು ಪ್ರದರ್ಶನ ಕ್ಕೆ ಬಂದ ಗ್ರಾಹಕರಿಗೆ ಮಾಹಿತಿ ನೀಡಿದ್ದವು.ಇವುಗಳಲ್ಲಿ ಕೃಷಿ ಇಲಾಖೆ ಪ್ರಥಮ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

The post ಕೃಷಿ ಮತ್ತು ಕೈಗಾರಿಕೆ ದೇಶದ ಎರಡು ಕಣ್ಣುಗಳಿದ್ದಂತೆ : ಶ್ರೀ ಸಿದ್ದಲಿಂಗಸ್ವಾಮಿಜೀ appeared first on ಸುವರ್ಣ ಪ್ರಗತಿ.

]]>
ತುಮಕೂರು : ಕಳೆದ 15 ದಿನಗಳಿಂದ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಇಂದು ಮುಕ್ತಾಯಗೊಂಡಿದ್ದು, ಕೇಷಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ರೇಷ್ಮೆ ಇಲಾಖೆ ಕ್ರಮವಾಗಿ ಮೊದಲ ಮೂರು ಪಾರಿತೋಷಕಗಳನ್ನು ಪಡೆದುಕೊಂಡಿವೆ.
ಸರಕಾರದ 19,ಖಾಸಗಿ 05 ಕಂಪನಿಗಳು ತಮ್ಮಮಳಿಗೆ ತರೆದು ವಸ್ತು ಪ್ರದರ್ಶನ ಕ್ಕೆ ಬಂದ ಗ್ರಾಹಕರಿಗೆ ಮಾಹಿತಿ ನೀಡಿದ್ದವು.ಇವುಗಳಲ್ಲಿ ಕೃಷಿ ಇಲಾಖೆ ಪ್ರಥಮ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ್ವಿತೀಯ, ಹಾಗೂ ರೇಷ್ಮೆ ಇಲಾಖೆ ತೃತೀಯ ಪಾರಿತೋಷಕ ಪಡೆದುಕೊಂಡಿವೆ.ಉಳಿದಂತೆ ಪ್ರಥಮ ಸ್ಥಾನವನ್ನ 12, ದ್ವಿತೀಯ ಬಹುಮಾನವನ್ನು 08 ,ಹಾಗು ತೃತೀಯ ಬಹುಮಾನವನ್ನು 08 ಮಳಿಗೆಗಳು ಪಡೆದುಕೊಂಡಿವೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಸಿದ್ದಲಿಂಗಸ್ವಾಮಿಜೀ ಮಾತನಾಡಿ, 15 ದಿನಗಳ ಕಾಲದ ವಸ್ತು ಪ್ರದರ್ಶನ ಇಂದು ಮುಕ್ತಾಯಗೊಂಡಿದೆ.ನಮ್ಮ ಹಿರಿಯ ಶ್ರೀಗಳ ದೂರದೃಷ್ಟಿಯ ಫಲವಾಗಿ ಈ ವಸ್ತು ಪ್ರದರ್ಶನ ಆರಂಭಗೊಂಡು ಮುಂದುವರೆದುಕೊಂಡು ಬರುತ್ತಿದೆ.
ಕೃಷಿ ಮತ್ತು ಕೈಗಾರಿಕೆ ಎರಡು ದೇಶದ ಕಣ್ಣುಗಳಿದ್ದಂತೆ,ಕೃಷಿಯ ಬಗ್ಗೆಯ ಆಸಕ್ತಿ ಮತ್ತು ಕೃಷಿ ಭೂಮಿ ಎರಡು ಕಡಿಮೆಯಾಗಿರುವ ಕಾಲದಲ್ಲಿಯೂ, ಜನರಿಗೆ ಅಗತ್ಯವಿರುವ ಆಹಾರ ಒದಗಿಸುವ ಕಾರ್ಯ ಮಾಡಲಾಗುತ್ತಿದೆ.
ಮಹಾತ್ಮಗಾಂಧಿ,ವಿಶ್ವೇಶ್ವರಯ್ಯ ನಡುವೆ ದೊಡ್ಡ ಕೈಗಾರಿಕೆಗಳ ಕುರಿತು ತಿಕ್ಕಾಟ ಇತ್ತು.ದೊಡ್ಡ ಕೈಗಾರಿಕೆಗಳ ಮೂಲಕ ಉದ್ಯೋಗ ನೀಡುವ ಕಾರ್ಯ ನಡೆದಿದೆ.ಇದೇ ಮೊದಲ ಬಾರಿಗೆ ನ್ಯಾಯಾಂಗ ಇಲಾಖೆ ಮಳಿಗೆ ತೆರೆದು ಮಾಹಿತಿ ನೀಡಿದ್ದು ವಿಶೇಷ ಎಂದರು.

ಪಾರಿತೋಷಕ ಮತ್ತು ಬಹುಮಾನ ಪಡೆದ ಸರಕಾರಿ ಮತ್ತು ಖಾಸಗಿ ಮಳಿಗೆಗಳ ಮುಖ್ಯಸ್ಥರಿಗೆ ಪಾರಿತೋಷಕ ಮತ್ತು ಬಹುಮಾನ ವಿತರಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ,ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಸರಕಾರದ ಯೋಜನೆಗಳ ಮಾಹಿತಿ ನೀಡಿ, ಜನರನ್ನು ಜಾಗೃತಿಗೊಳಿಸಿದ್ದಾರೆ.ಇದಕ್ಕಾಗಿ ಶ್ರೀ ಮಠದ ಆಡಳಿತ ಮಂಡಳಿಗೆ ಹೃಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು

ಪ್ರಾಸ್ತಾವಿಕ ವಾಗಿ ಮಾತನಾಡಿದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸಮಿತಿಯ ಜಂಟಿ ಕಾರ್ಯದರ್ಶಿ ಕೆಂಬ ರೇಣುಕಯ್ಯ,ಜಿಲ್ಲೆಯ ಕೃಷಿಕರು ಮತ್ತು ಉದ್ದಿಮೆದಾರರಿಗೆ ಅನುಕೂಲವಾಗಲೆಂದು ತ್ರಿವಿಧ ದಾಸೋಹಿ ಡಾ.ಶ್ರೀಶಿವಕುಮಾರ್ ಸ್ವಾಮೀಜಿ ಅವರು ಆರಂಭಿಸಿದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತಾ ಬಂದಿದೆ.ಅಲ್ಲ ಬಹುದೊಡ್ಡ ಮಾಹಿತಿ ಕಣಜವಾಗಿ ಮಾರ್ಪಾಟಾಗಿದೆ.ಸರಕಾರದ ವಿವಿಧ ಇಲಾಖೆಗಳು ಹಾಗು ಖಾಸಗಿಯವರು ಹಾಗು ವಿವಿಧ ವಾಣಿಜ್ಯೋದ್ಯಮಿಗಳು ಮಳಿಗೆ ತೆರದು ಜನರಿಗೆ ಮಾಹಿತಿ ನೀಡುತ್ತಿದ್ಸಾರೆ.ಅಲ್ಲದೆ ನಾಟಕ,ಸುಗಮಸಂಗೀತ, ನೃತ್ಯಗಳ ಮೂಲಕ ಮನರಂಜನೆಯನ್ನು ವ್ಯವಸ್ಥೆ ಮಾಡಲಾಗಿದೆ.ಸರಕಾರದ ಅನುದಾನವಿಲ್ಲದೆ ನಡೆಯುತ್ತಿರುವ ಏಕೈಕ ವಸ್ತು ಪ್ರದರ್ಶನವಾಗಿದೆ ಎಂದರು.
ವೇದಿಕೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ,ತಹಶಿಲ್ದಾರ್ ಸಿದ್ದೇಶ್.ಎಂ, ತುಮಕೂರು ಉಪವಿಭಾಗಾಧಿಕಾರಿ ಹೆಚ್.ಶಿವಪ್ಪ,ಕಾರ್ಯಕ್ರಮದಲ್ಲಿ ಮೈದಾಳ ಗ್ರಾಮಪಂಚಾಯಿತಿ ಅಧ್ಯಕ್ಷೆ ಶ್ರೀ ಮತಿ ಮಾಲಾ ಮಂಜುನಾಥ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನೂರುನ್ನಿಸಾ,ವಸ್ತು ಪ್ರದರ್ಶನ ಸಮಿತಿಯ ಕಾರ್ಯದರ್ಶಿ ಪ್ರೊ. ಗಂಗಾಧರಯ್ಯ,ಜAಟಿ ಕಾರ್ಯದರ್ಶಿ ಶಿವಕುಮಾರ್, ಸಾಂಸ್ಕöÈತಿಕ ಸಮಿತಿಯ ಸಹ ಸಂಚಾಲಕ ಎಂ.ನಂದೀಶ್,ಡಿಐಸಿಯ ಜಂಟಿ ನಿರ್ದೇಶಕ ಪಿ.ನಾಗೇಶ್ ಮತ್ತಿತರರು
ಉಪಸ್ಥಿತರಿದ್ದರು.

The post ಕೃಷಿ ಮತ್ತು ಕೈಗಾರಿಕೆ ದೇಶದ ಎರಡು ಕಣ್ಣುಗಳಿದ್ದಂತೆ : ಶ್ರೀ ಸಿದ್ದಲಿಂಗಸ್ವಾಮಿಜೀ appeared first on ಸುವರ್ಣ ಪ್ರಗತಿ.

]]>
ತೆಲುಗಿನ ಜನಪ್ರಿಯ ನಟ ನಂದಮೂರಿ ತಾರಕರತ್ನ ಇನ್ನಿಲ್ಲ https://suvarnapragathi.in/archives/5810 Sun, 19 Feb 2023 07:13:07 +0000 https://suvarnapragathi.in/?p=5810 ತೆಲುಗಿನ ಖ್ಯಾತ ನಟ ಹಾಗೂ ಟಿಡಿಪಿ ನಾಯಕ ಜೂನಿಯರ್‌ ಎನ್‌ಟಿಆರ್‌ ಅವರ ಸಂಬಂಧಿ ನಂದಮೂರಿ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ 23 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ನೆರೆಯ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ತೀವ್ರ ಹೃದಯಾಘಾತಕ್ಕೊಳಗಾದ ತಾರಕ ರತ್ನ (39) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 27 ರಂದು …

The post ತೆಲುಗಿನ ಜನಪ್ರಿಯ ನಟ ನಂದಮೂರಿ ತಾರಕರತ್ನ ಇನ್ನಿಲ್ಲ appeared first on ಸುವರ್ಣ ಪ್ರಗತಿ.

]]>
ತೆಲುಗಿನ ಖ್ಯಾತ ನಟ ಹಾಗೂ ಟಿಡಿಪಿ ನಾಯಕ ಜೂನಿಯರ್‌ ಎನ್‌ಟಿಆರ್‌ ಅವರ ಸಂಬಂಧಿ ನಂದಮೂರಿ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ 23 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ನೆರೆಯ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ತೀವ್ರ ಹೃದಯಾಘಾತಕ್ಕೊಳಗಾದ ತಾರಕ ರತ್ನ (39) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜನವರಿ 27 ರಂದು ಕುಪ್ಪಂನಲ್ಲಿ ನಡೆದ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ರಾಜ್ಯಾದ್ಯಂತ ‘ಪಾದಯಾತ್ರೆ’ಗೆ ಚಾಲನೆ ನೀಡುವ ವೇಳೆ ಅವರು ಕುಸಿದು ಬಿದ್ದಿದ್ದರು.

ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ನಾರಾಯಣ ಹೃದಯಾಲಯ
ಆಸ್ಪತ್ರೆಗೆ ದಾಖಲಾದಾಗಿನಿಂದಲೂ ತೀವ್ರ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು ಶನಿವಾರ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ತಾರಕ ರತ್ನ ಅವರು ಪ್ರಸಿದ್ಧ ಚಲನಚಿತ್ರ ನಟ ಮತ್ತು ಮಾಜಿ ಆಂಧ್ರಪ್ರದೇಶ ಮುಖ್ಯಮಂತ್ರಿ ದಿವಂಗತ ಎನ್ ಟಿ ರಾಮರಾವ್ ಅವರ ಮೊಮ್ಮಗ ಮತ್ತು ನಂದಮೂರಿ ಮೋಹನ್ ಕೃಷ್ಣ ಅವರ ಮಗ.

ಅವರು ಪತ್ನಿ ಅಲೇಖ್ಯ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾರಕ ರತ್ನ ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಅವರ ಚೊಚ್ಚಲ ‘ಒಕಟೋ ನಂಬರ್ ಕುರ್ರಾಡು’ ಸೇರಿದಂತೆ ಕೆಲವು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಆರ್‌ಆರ್‌ಆರ್’ ಖ್ಯಾತಿಯ ಜೂನಿಯರ್ ಎನ್‌ಟಿಆರ್‌ನಂತಹ ಅವರ ಕೆಲವು ಸೋದರ ಸಂಬಂಧಿಗಳಂತೆ ಬೆಳ್ಳಿತೆರೆಯಲ್ಲಿ ದೊಡ್ಡ ಹೆಸರು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಸೂಪರ್ ಸ್ಟಾರ್ ಚಿರಂಜೀವಿ, ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಸೇರಿದಂತೆ ಹಲವಾರು ಗಣ್ಯರು ತಾರಕ ರತ್ನ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

The post ತೆಲುಗಿನ ಜನಪ್ರಿಯ ನಟ ನಂದಮೂರಿ ತಾರಕರತ್ನ ಇನ್ನಿಲ್ಲ appeared first on ಸುವರ್ಣ ಪ್ರಗತಿ.

]]>
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ https://suvarnapragathi.in/archives/5783 Sun, 12 Feb 2023 07:21:19 +0000 https://suvarnapragathi.in/?p=5783 ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ. ಖಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಯ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶವಿಲ್ಲ. ಮಾತನಾಡಲು ಧೈರ್ಯವಿರುವವರನ್ನು ಜೈಲಿಗೆ ತಳ್ಳಲಾಗುತ್ತಿದೆ ಎಂದು ಆಪಾದಿಸಿದ್ದಾರೆ. 2014ರಲ್ಲಿ ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ …

The post ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ appeared first on ಸುವರ್ಣ ಪ್ರಗತಿ.

]]>
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.

ಖಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಯ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶವಿಲ್ಲ. ಮಾತನಾಡಲು ಧೈರ್ಯವಿರುವವರನ್ನು ಜೈಲಿಗೆ ತಳ್ಳಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

2014ರಲ್ಲಿ ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ಅಧಿಕಾರಕ್ಕೆ ಬಂದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಮತ್ತು ಬಡತನ ಹೆಚ್ಚುತ್ತಿದೆ ಎಂದು ಹೇಳಿದರು.

ದೇಶದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್ ನಾಯಕರು ಎಂದು ಖರ್ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಪಕ್ಷದ 60 ದಿನಗಳ ಹಾಥ್ ಸೆ ಹಾಥ್ ಜೋಡೋ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷರು ಪಾಕೂರಿನ ಗುಮಾನಿ ಮೈದಾನದಲ್ಲಿ ಅವರು ಮಾತನಾಡಿದರು.

ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ರಾಜ್ಯ ಸಚಿವ ಅಲಂಗೀರ್ ಆಲಂ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

The post ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ appeared first on ಸುವರ್ಣ ಪ್ರಗತಿ.

]]>
ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಗುಬ್ಬಿ ಹೆಚ್‌ಎಎಲ್ ಘಟಕ ಕಾರ್ಯಾರಂಭ : ಪ್ರಧಾನಿ ನರೇಂದ್ರ ಮೋದಿ https://suvarnapragathi.in/archives/5721 Tue, 07 Feb 2023 02:46:38 +0000 https://suvarnapragathi.in/?p=5721 ತುಮಕೂರು : ರಕ್ಷಣಾ ವಲಯದಲ್ಲಿ ‘ಆತ್ಮನಿರ್ಭರ್ ಭಾರತ್’ಗೆ ಹೆಚ್ಚು ಆದ್ಯತೆಯನ್ನು ನೀಡುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ತುಮಕೂರು ಹೆಲಿಕಾಪ್ಟರ್ ಫ್ಯಾಕ್ಟರಿಯ ಮೇಕ್ ಇನ್ ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಬಾನಿನಲ್ಲಿ ಹಾರಾಡಲಿದ್ದು, ಈ ಮೂಲಕ ಭಾರತೀಯ ಸೇನೆಯ ಸಾಮರ್ಥ್ಯ ಮತ್ತಷ್ಟು ಹೆಚ್ಚಲಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಏಕಮೇವ(ಒನ್ ಸ್ಟಾಪ್) ಪರಿಹಾರ ಒದಗಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದೆ ಎಂದರು. ಅವರಿಂದು ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್‌ನ …

The post ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಗುಬ್ಬಿ ಹೆಚ್‌ಎಎಲ್ ಘಟಕ ಕಾರ್ಯಾರಂಭ : ಪ್ರಧಾನಿ ನರೇಂದ್ರ ಮೋದಿ appeared first on ಸುವರ್ಣ ಪ್ರಗತಿ.

]]>
ತುಮಕೂರು : ರಕ್ಷಣಾ ವಲಯದಲ್ಲಿ ‘ಆತ್ಮನಿರ್ಭರ್ ಭಾರತ್’ಗೆ ಹೆಚ್ಚು ಆದ್ಯತೆಯನ್ನು ನೀಡುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ತುಮಕೂರು ಹೆಲಿಕಾಪ್ಟರ್ ಫ್ಯಾಕ್ಟರಿಯ ಮೇಕ್ ಇನ್ ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಬಾನಿನಲ್ಲಿ ಹಾರಾಡಲಿದ್ದು, ಈ ಮೂಲಕ ಭಾರತೀಯ ಸೇನೆಯ ಸಾಮರ್ಥ್ಯ ಮತ್ತಷ್ಟು ಹೆಚ್ಚಲಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಏಕಮೇವ(ಒನ್ ಸ್ಟಾಪ್) ಪರಿಹಾರ ಒದಗಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದೆ ಎಂದರು.
ಅವರಿಂದು ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್‌ನ ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆ ಉದ್ಘಾಟನೆ ಮತ್ತು ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ಅನಾವರಣ ಜಲಜೀವನ್ ಮಿಷನ್ ಯೋಜನೆ, ಚೆನ್ನೆöÊ ಬೆಂಗಳೂರು ಕೈಗಾರಿಕಾ ಕಾರಿಡಾರ್ ತುಮಕೂರು ಕೈಗಾರಿಕಾ ಟೌನ್‌ಶಿಫ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಾ, ಹೆಚ್‌ಎಎಲ್ ಕಾರ್ಖಾನೆಯಿಂದಾಗಿ ಅಕ್ಕ-ಪಕ್ಕದ ಗ್ರಾಮದ ಜನರಿಗೆ ಉದ್ಯೋಗದ ಅವಕಾಶ ಹೆಚ್ಚಳವಾಗುತ್ತದೆ ಎಂದ ಅವರು, ಕಳೆದ 8 ವರ್ಷಗಳಲ್ಲಿ ಸರ್ಕಾರಿ ಫ್ಯಾಕ್ಟರಿಗಳಲ್ಲಿ ಸಾಕಷ್ಟು ಸುಧಾರಣೆ ತಂದಿದ್ದೇವೆ ಎಂದರು.
ದೇಶದ ಅತಿ ದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ ತುಮಕೂರಿಗೆ ಸಿಕ್ಕಿದೆ. ನನ್ನ ಸೌಭಾಗ್ಯದಿಂದ ಹೆಚ್‌ಎಎಲ್ ಫ್ಯಾಕ್ಟರಿಗೆ ಶಿಲಾನ್ಯಾಸ ಮಾಡುವ ಅವಕಾಶ ದೊರೆತಿತ್ತು. ಇದೀಗ ಹೆಚ್‌ಎಎಲ್ ಫ್ಯಾಕ್ಟರಿಯನ್ನು ಲೋಕಾರ್ಪಣೆಗೊಳಿಸುವ ಸರದಿಯೂ ದೊರಕಿರುವುದು ಸಂತಸ ತಂದಿದೆ. ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಹೆಚ್‌ಎಎಲ್ ಒಂದು ಉದಾಹರಣೆ. ರಕ್ಷಣಾ ಉಪಕರಣಗಳ ಉತ್ಪಾದನೆ ಭಾರತದಲ್ಲೇ ಆಗುತ್ತಿದೆ. ನಮ್ಮ ಸೇನೆಗೆ ಮೇಡ್ ಇನ್ ಇಂಡಿಯಾ ಶಸ್ತಾçಸ್ತçಗಳನ್ನು ನೀಡುತ್ತಿದ್ದೇವೆ. ಸೇನಾ ಉಪಕರಣಗಳ ಆಮದುಗಳು ಸಹ ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೈಗಾರಿಕಾ ಟೌನ್‌ಶಿಫ್‌ಗಳ ಬೆಳವಣಿಗೆಯಿಂದ ಭಾರತ ದೊಡ್ಡ ಔದ್ಯೋಗಿಕ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ‘ಹರ್ ಘರ್ ಜಲ್ ಮತ್ತು ಹರ್ ಕೇತ್ ಕೋ ಪಾನಿ’ ಒದಗಿಸುವ ನಿಟ್ಟಿನಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಅಭೂತಪೂರ್ವ ರೀತಿಯಲ್ಲಿ ವಿಸ್ತರಣೆಯಾಗಿದೆ. ಇದರಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಅನುಕೂಲವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ನೀರಾವರಿ ಕ್ಷೇತ್ರಗಳಿಗೆ ಲಾಭವಾಗಿದೆ ಎಂದರು.

ಶಕ್ತಿಮಾನ್ ಭಾರತ್ ದಿಸೆಯಲ್ಲಿ ಬಜೆಟ್ ಮಂಡಿಸಲಾಗಿದ್ದು, ಹಳ್ಳಿಗಳು, ಬಡವರು, ಆದಿವಾಸಿಗಳು, ಮಹಿಳೆಯರು, ಯುವಜನರಿಗಾಗಿ ಈ ಬಜೆಟ್‌ನಲ್ಲಿ ಉತ್ತಮ ಗಟ್ಟಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸರ್ವರ ಏಳಿಗೆಯ ಬಜೆಟ್ ಇದಾಗಿದೆ. ಯುವಜನರಿಗೆ ಹೊಸ ಔದ್ಯೋಗಿಕ ಅವಕಾಶವನ್ನು ಕಲ್ಪಿಸುವ, ಭಾರತದ ಹಳ್ಳಿಗಳನ್ನು ಮತ್ತು ಕೃಷಿಯನ್ನು ಆಧುನೀಕರಣಗೊಳಿಸುವ ಮಹಿಳೆಯರನ್ನು ಸಬಲೀಕರಣಗೊಳಿಸುವ ಬಜೆಟ್ ಇದಾಗಿದೆ ಎಂದರು.
ಪಿಎಂ ಕಿಸಾನ್ ಸಮ್ಮಾನ್ ಶಕ್ತಿ ಯೋಜನೆಯಡಿ ಸಣ್ಣ ರೈತರಿಗೆ ಅನುಕೂಲವಾಗಲಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಗ್ಯಾರಂಟಿ ರಹಿತ ಸಾಲ ಸೌಲಭ್ಯ, ಕಮ್ಮಾರ, ಅಕ್ಕಸಾಲಿಗ, ಬಡಗಿ, ಶಿಲ್ಪಿ ಮುಂತಾದ ಕುಶಲ ಕರ್ಮಿಗಳಿಗೆ ವಿಕಾಸ ಯೋಜನೆಯಡಿ ಕೌಶಲ್ಯ ವೃದ್ಧಿಸುವ ನಿಟ್ಟಿನಲ್ಲಿ ಸಹಾಯ ನೀಡಲಾಗುತ್ತಿದೆ ಎಂದರು.
ಕರ್ನಾಟಕದ ಸಿರಿಧಾನ್ಯಗಳಾದ ನವಣೆ, ಅರ್ಕ, ಸಜ್ಜೆ, ರಾಗಿ, ಊದಲು, ಬರಗು ಉತ್ತೇಜಿಸುವ ನಿಟ್ಟಿನಲ್ಲಿ ಈ ಆಹಾರ ಪದಾರ್ಥಗಳಿಗೆ ‘ಶ್ರೀ ಅನ್ನ’ ಹೆಸರು ನೀಡುವ ಮೂಲಕ ಶ್ರೀ ಅನ್ನ ಉತ್ಪಾದನೆಗೆ ಬಲ ನೀಡಲಾಗಿದೆ. ಇದರಿಂದ ಬರಡು ಜಮೀನು ಹೊಂದಿರುವ ಪ್ರಯೋಜನವಾಗಲಿದೆ ಎಂದರು.

ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ತ್ರಿವಿಧ ದಾಸೋಹಗಳಾದ ಅನ್ನ, ಅಕ್ಷರ, ಆಶ್ರಯ ಕಾರ್ಯಕ್ರಮಗಳನ್ನು ಶ್ರೀ ಸಿದ್ಧಲಿಂಗ ಸ್ವಾಮಿಗಳು ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ. ಸಂತರ ಆಶೀರ್ವಾದದಿಂದ ಕರ್ನಾಟಕ ಸುಬಿಕ್ಷವಾಗಿದೆ ಎಂದರು.
ತಮ್ಮ ಭಾಷಣದ ಪ್ರಾರಂಭದಲ್ಲಿ ‘ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ನಿಟ್ಟೂರು ನಗರದ ಆತ್ಮೀಯ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು’ ಎಂದು ಕನ್ನಡದಲ್ಲಿ ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿಗಳು ಕರ್ನಾಟಕದ ರಾಗಿ ಮುದ್ದೆ ಹಾಗೂ ರಾಗಿ ರೊಟ್ಟಿಯನ್ನು ಈ ಸಂದರ್ಭ ನೆನೆದರು.
ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಾತನಾಡಿ, ಕರ್ನಾಟಕ ವಿಜ್ಞಾನ, ತಂತ್ರಜ್ಞಾನ, ಪ್ರಗತಿ, ಶಾಂತಿ, ಸೌಹಾರ್ದತೆಗೆ ಹೆಸರುವಾಸಿಯಾಗಿದೆ ಎಂದ ಅವರು, ಇಂತಹ ನಾಡಿನಲ್ಲಿ ವರ್ಷಕ್ಕೆ 60 ಲಘು ಉಪಯುಕ್ತ ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ಪ್ರಧಾನಿ ಮೋದಿ ಅವರು ಲೋಕಾರ್ಪಣೆಗೊಳಿಸಿರುವುದು ಸಂತಸ ತಂದಿದೆ ಎಂದರು.
ಈ ಗ್ರೀನ್ ಫ್ರೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿಯು ಭವಿಷ್ಯದ ಎಲ್ಲಾ ಹೆಲಿಕಾಪ್ಟರ್ ಯೋಜನೆಗೆ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ರೂಪಿಸಲಾಗಿದ್ದು, ಭವಿಷ್ಯದಲ್ಲಿ ಹೆಲಿಕಾಪ್ಟರ್ ಮತ್ತು ಅದರ ಇಂಜಿನ್‌ಗಳ ಉತ್ಪಾದನೆ, ನಿರ್ವಹಣೆ ಹಾಗೂ ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆ ಸೌಲಭ್ಯಗಳಿಗಾಗಿ ಸಾಮರ್ಥ್ಯವನ್ನು ನಿರ್ಮಿಸಲಾಗುವುದು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ನಡೆದಾಡುವ ದೇವರ ಜಿಲ್ಲೆಯಲ್ಲಿ ಹೆಚ್‌ಎಎಲ್ ಕಾರ್ಖಾನೆ ಸ್ಥಾಪನೆ ಔದ್ಯೋಗಿಕ ಕ್ರಾಂತಿ ಮತ್ತು ಆತ್ಮ ನಿರ್ಭರ ಕ್ರಾಂತಿಗೆ ಸಾಕ್ಷಿಯಾಗಿದೆ. ಹೆಚ್‌ಎಎಲ್ ತನ್ನದೇ ಇತಿಹಾಸ ಹೊಂದಿದ್ದು, ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಅತ್ಯಂತ ಅಗ್ರಗಣ್ಯ ಸಂಸ್ಥೆ ಎನಿಸಿದ್ದು, ಇಂತಹ ಹೆಚ್‌ಎಎಲ್ ಕಾರ್ಖಾನೆಗೆ ಪ್ರಧಾನ ಮಂತ್ರಿ ಮೋದಿ ಅವರು ಅಡಿಗಲ್ಲು ಹಾಕಿ ಅವರೇ ಉದ್ಘಾಟನೆ ನೆರವೇರಿಸಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು.
ಲಘು ಸಾಮರ್ಥ್ಯದ ಹೆಲಿಕಾಪ್ಟರ್ ಉತ್ಪಾದನೆಯ ನಂತರ ಹೆವಿ ಡ್ಯೂಟಿ ರಕ್ಷಣಾ ವಲಯದ ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಗುಬ್ಬಿ ಘಟಕಕ್ಕೆ ಇದೆ. ಈ ಘಟಕದ ಸ್ಥಾಪನೆಯಿಂದ 10ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಶೇ.90ರಷ್ಟು ರಕ್ಷಣಾ ಉಪಕರಣಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ನಾವು ಶೇ.60ರಷ್ಟು ನಾವೇ ಹೆಲಿಕಾಪ್ಟರ್ ಬಿಡಿಭಾಗಗಳನ್ನು ತಯಾರಿಸಿ ರಫ್ತು ಮಾಡುತ್ತಿದ್ದೇವೆ. ಇದು ಆತ್ಮ ನಿರ್ಭರ್‌ಗೆ ಕೈಗನ್ನಡಿಯಾಗಿದೆ ಎಂದರು.
ಜಲಜೀವನ್ ಮಿಷನ್ ಯೋಜನೆಯಡಿ ಚಿಕ್ಕನಾಯಕನಹಳ್ಳಿ, ತಿಪಟೂರಿನ 3 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು, 3 ವರ್ಷದಲ್ಲಿ 37ಲಕ್ಷ ಮನೆಗಳಿಗೆ ಜೆಜೆಎಂ ಯೋಜನೆಯಡಿ ಮನೆ-ಮನೆಗೆ ಗಂಗೆಯನ್ನು ಹರಿಸಲಾಗಿದೆ ಎಂದ ಅವರು, ಚೆನ್ನೆöÊ-ಬೆಂಗಳೂರು ಬಹು ಉದ್ದೇಶಿತ ಯೋಜನೆಯಿಂದಾಗಿ ಲಕ್ಷಾಂತರ ಜನರಿಗೆ ಉದ್ಯೋಗ ದೊರಕಲಿದೆ ಎಂದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಿಗೆ ಅಡಿಕೆಯಿಂದ ಮಾಡಿದಂತಹ ಹಾರ, ಪೇಟ ಹಾಗೂ ಶಿವಕುಮಾರ ಸ್ವಾಮಿಗಳ ಪುತ್ಥಳಿಯನ್ನು ಕಾಣಿಕೆಯನ್ನಾಗಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯ ಸಚಿವರುಗಳಾದ ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಮುರಗೇಶ್ ನಿರಾಣಿ, ವಿ.ಸೋಮಣ್ಣ, ಬಿ.ಸಿ.ನಾಗೇಶ್, ಶಾಸಕರುಗಳಾದ ಜ್ಯೋತಿಗಣೇಶ್, ರಾಜೇಶ್‌ಗೌಡ, ಎಸ್.ಜಯರಾಂ, ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಸಂಸದರಾದ ಬಸವರಾಜು, ಜಗ್ಗೇಶ್ ಮುಂತಾದವರು ಉಪಸ್ಥಿತರಿದ್ದರು.

The post ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಗುಬ್ಬಿ ಹೆಚ್‌ಎಎಲ್ ಘಟಕ ಕಾರ್ಯಾರಂಭ : ಪ್ರಧಾನಿ ನರೇಂದ್ರ ಮೋದಿ appeared first on ಸುವರ್ಣ ಪ್ರಗತಿ.

]]>
ಹೆಲಿಕ್ಯಾಪ್ಟರ್ ತಯಾರಿಕ ಘಟಕ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಅಭಿಮಾನಿಗಳ ಸಜ್ಜು https://suvarnapragathi.in/archives/5708 Mon, 06 Feb 2023 03:20:20 +0000 https://suvarnapragathi.in/?p=5708 ಗುಬ್ಬಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುಬ್ಬಿ ತಾಲ್ಲೂಕಿನ ಜನತೆಯ ಪರವಾಗಿ ವಿಶೇಷ ಆತಿಥ್ಯ ಸಿದ್ಧವಾಗಿದ್ದು ಕಲ್ಪತರು ನಾಡಿನ ಕೊಡುಗೆಯಾಗಿ ಅಡಕೆ ಪೇಟ ಮತ್ತು ಅಡಕೆ ಹಾರ ನೀಡಲು ಜಿಲ್ಲೆಯ ಅಭಿಮಾನಿಗಳು ಸಜ್ಜಾಗಿರುವುದು ಇಡೀ ಕಾರ್ಯಕ್ರಮಕ್ಕೆ ಮೆರುಗು ತಂದಿದೆ. ವಿಶ್ವವೇ ಗುರುತಿಸುವ ಹೆಲಿಕ್ಯಾಪ್ಟರ್ ತಯಾರಿಕ ಘಟಕ ಫೆಬ್ರವರಿ 6 ರಂದು ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಉದ್ಘಾಟನೆಗಾಗಿ ತಾಲೂಕಿನ ಬಿದರೆ ಹಳ್ಳ ಕಾವಲ್ ನಲ್ಲಿ ಸಕಲ ಸಜ್ಜುಗೊಂಡಿದ್ದು ಇದರ ಹಿನ್ನೆಲೆ ಮೋದಿ ಅಭಿಮಾನಿಗಳಿಂದ ಅಡಿಕೆಯನ್ನು …

The post ಹೆಲಿಕ್ಯಾಪ್ಟರ್ ತಯಾರಿಕ ಘಟಕ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಅಭಿಮಾನಿಗಳ ಸಜ್ಜು appeared first on ಸುವರ್ಣ ಪ್ರಗತಿ.

]]>
ಗುಬ್ಬಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುಬ್ಬಿ ತಾಲ್ಲೂಕಿನ ಜನತೆಯ ಪರವಾಗಿ ವಿಶೇಷ ಆತಿಥ್ಯ ಸಿದ್ಧವಾಗಿದ್ದು ಕಲ್ಪತರು ನಾಡಿನ ಕೊಡುಗೆಯಾಗಿ ಅಡಕೆ ಪೇಟ ಮತ್ತು ಅಡಕೆ ಹಾರ ನೀಡಲು ಜಿಲ್ಲೆಯ ಅಭಿಮಾನಿಗಳು ಸಜ್ಜಾಗಿರುವುದು ಇಡೀ ಕಾರ್ಯಕ್ರಮಕ್ಕೆ ಮೆರುಗು ತಂದಿದೆ.

ವಿಶ್ವವೇ ಗುರುತಿಸುವ ಹೆಲಿಕ್ಯಾಪ್ಟರ್ ತಯಾರಿಕ ಘಟಕ ಫೆಬ್ರವರಿ 6 ರಂದು ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಉದ್ಘಾಟನೆಗಾಗಿ ತಾಲೂಕಿನ ಬಿದರೆ ಹಳ್ಳ ಕಾವಲ್ ನಲ್ಲಿ ಸಕಲ ಸಜ್ಜುಗೊಂಡಿದ್ದು ಇದರ ಹಿನ್ನೆಲೆ ಮೋದಿ ಅಭಿಮಾನಿಗಳಿಂದ ಅಡಿಕೆಯನ್ನು ಅಂಟಿಸಿ ಪೇಟ ಸಿದ್ದ ಮಾಡಿದ್ದು ಹಾರ ತಯಾರಿಕೆಗೆ ಉಂಡೆ ಅಡಕೆ ಬಳಸಲಾಗಿ ಸುಂದರವಾಗಿ ಸಿದ್ಧಗೊಂಡು ಮೋದಿ ಬರುವಿಕೆಗೆ ಕಾದು ಕುಳಿತಿದೆ.

 

 

 

 

ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವರು , ಸಹಾಯಕ ರಕ್ಷಣಾ ಸಚಿವರು , ರಾಜ್ಯ ರಕ್ಷಣಾ ಸಚಿವರು , ರಾಜ್ಯಪಾಲರು , ಮುಖ್ಯಮಂತ್ರಿಗಳು , ಸಚಿವರುಗಳು , ಶಾಸಕರು , ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಸರಿ ಸುಮಾರು 1500 ಕ್ಕೂ ಅಧಿಕ ಮಂದಿ ಗಣ್ಯರು ಆಗಮಿಸಲಿದ್ದು, 70 ಸಾವಿರದಿಂದ ಒಂದು ಲಕ್ಷ ಮಂದಿ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ . ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ , ಬಸ್ ವ್ಯವಸ್ಥೆ , ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಯಾವುದೇ ರೀತಿಯ ಆಡಚಣೆಗಳು ಆಗದಂತೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದೆ.

ಫೆ.6ರ ಸೋಮವಾರ ಬೆಳಿಗ್ಗೆಯಿಂದ ಸಂಜೆವರೆಗೂ 206 ರಾಷ್ವ್ರೀಯ ಹೆದ್ದಾರಿಯ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು ಅನ್ಯ ಮಾರ್ಗವನ್ನು ಸಹ ಸೂಚಿಸಲಾಗಿದೆ. ಜಿಲ್ಲೆಗೆ ಪ್ರಧಾನಿ ಅವರ ಭೇಟಿ ಹಿನ್ನಲೆಯಲ್ಲಿ ಈಗಾಗಲೇ ಹಲವು ಸಭೆಗಳನ್ನು ನಡೆಸಿ ಅಗತ್ಯ ಸೂಚನೆಗಳನ್ನು ಕೊಡಲಾಗಿದೆ. ಒಳಭಾಗದಲ್ಲಿ ಎಚ್ ಎಎಲ್ ಅಧಿಕಾರಿಗಳು ಸಹ ಎಲ್ಲಾ ಸಕಲ ಸಿದ್ದತೆಗಳನ್ನು ಕೈಗೊಂಡಿದ್ದಾರೆ.

ಮಧ್ಯಾಹ್ನ 1 ಗಂಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಾರ್ವಜನಿಕರನ್ನು ಬಿಡಲು ಪ್ರಾರಂಭಿಸಿ 2.30 ರ ಒಳಗಡೆ ಎಲ್ಲರೂ ಒಳಗಡೆ ಸೇರಬೇಕಿದೆ. ನೀರು , ಬ್ಯಾಗ್ ಪ್ಲಾಸ್ವಿಕ್ ಯಾವುದೇ ವಸ್ತುಗಳನ್ನು ತರುವಂತಿಲ್ಲ ಎಲ್ಲರಿಗೂ ಕೂಡ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ.
ಹಾಗೆಯೇ ಊಟದ ವ್ಯವಸ್ಥೆ ಕೂಡಾ ನೂರಾರು ಬಾಣಸಿಗರ ತಂಡ ಸಿಹಿ ಖಾದ್ಯ ಅಡುಗೆ ತಯಾರಿ ನಡೆಸಿದ್ದಾರೆ.

ವರದಿ: ದೇವರಾಜು ಮಡೇನಹಳ್ಳಿ.

The post ಹೆಲಿಕ್ಯಾಪ್ಟರ್ ತಯಾರಿಕ ಘಟಕ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಅಭಿಮಾನಿಗಳ ಸಜ್ಜು appeared first on ಸುವರ್ಣ ಪ್ರಗತಿ.

]]>
ಫೆ.6 ರಂದು ಹೆಲಿಕ್ಯಾಪ್ಟರ್ ಘಟಕ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ : ಜಿಲ್ಲಾಡಳಿತದಿಂದ ಸಕಲ ಸಿದ್ದತೆ : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ https://suvarnapragathi.in/archives/5681 Fri, 03 Feb 2023 12:33:30 +0000 https://suvarnapragathi.in/?p=5681 ತುಮಕೂರು : ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಫೆ.6 ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿ ಎಲ್‌ಯುಹೆಚ್ ಹೆಲಿಕಾಪ್ಟರ್‌ನ್ನು ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ. ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಹೆಚ್‌ಎಎಲ್ ಘಟಕದ ಮುಂಭಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ನಿರ್ಮಾಣಕ್ಕೆ 615 ಎಕರೆ ಜಮೀನನ್ನು ಕೊಡಲಾಗಿತ್ತು.2016 ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೂಮಿ …

The post ಫೆ.6 ರಂದು ಹೆಲಿಕ್ಯಾಪ್ಟರ್ ಘಟಕ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ : ಜಿಲ್ಲಾಡಳಿತದಿಂದ ಸಕಲ ಸಿದ್ದತೆ : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ appeared first on ಸುವರ್ಣ ಪ್ರಗತಿ.

]]>
ತುಮಕೂರು : ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಫೆ.6 ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿ ಎಲ್‌ಯುಹೆಚ್ ಹೆಲಿಕಾಪ್ಟರ್‌ನ್ನು ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.
ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಹೆಚ್‌ಎಎಲ್ ಘಟಕದ ಮುಂಭಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ನಿರ್ಮಾಣಕ್ಕೆ 615 ಎಕರೆ ಜಮೀನನ್ನು ಕೊಡಲಾಗಿತ್ತು.2016 ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದರು.6 ವರ್ಷಗಳಲ್ಲಿ ಹೆಲಿಕಾಪ್ಟರ್ ತಯಾರು ಮಾಡುವ ಮಟ್ಟಕ್ಕೆ ಸಿದ್ದಗೊಳಿಸಿ ಲೋಕಾರ್ಪಣೆ ಮಾಡಲಾಗುತ್ತಿದೆ. ಹೆಲಿಕಾಪ್ಟರ್ ಘಟಕದ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಈ ಅಭೂತ ಪೂರ್ವ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರು, ಸಹಾಯಕ ರಕ್ಷಣಾ ಸಚಿವರು,. ರಾಜ್ಯ ರಕ್ಷಣಾ ಸಚಿವರು, ರಾಜ್ಯಪಾಲರು,ಮುಖ್ಯಮಂತ್ರಿಗಳು,ಸಚಿವರುಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಮಂದಿ ಗಣ್ಯರು ಆಗಮಿಸುವ ನಿರೀಕ್ಷೆ ಇದೆ.ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ, ಬಸ್ ವ್ಯವಸ್ಛೆ, ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.ಯಾವುದೇ ರೀತಿಯ ಅಡಚಣೆಗಳು ಉಂಟಾಗದAತೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.ಫೆ.6ರಂದು ಬೆಳಗ್ಗೆಯಿಂದ ಸಂಜೆ ವರೆಗೆ 206 ರಾಷ್ಟಿçÃಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ವಾಹನ ಚಾಲಕರು, ಸಾರ್ವಜನಿಕರು ಮಾರ್ಗ ಬದಲಾವಣೆ ಬಗ್ಗೆ ಗಮನ ಹರಿಸಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಗೆ ಪ್ರಧಾನಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಐದಾರು ಬಾರಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ಕೊಡಲಾಗಿದೆ.ಹೆಚ್‌ಎಎಲ್ ಅಧಿಕಾರಿಗಳು ಸಹ ಎಲ್ಲ ಸಿದ್ದತೆ ಕೈಗೊಂಡಿದ್ದಾರೆ.ಹೆಚ್‌ಎಎಲ್ ಘಟಕದ ಉದ್ಘಾಟನೆ ಬಳಿಕ ಜಲಜೀವನ್ ಮಿಷನ್ ಯೋಜನೆಯ ಮನೆ ಮನೆ ಗಂಗೆ ಕಾರ್ಯಕ್ರಮಕ್ಕೆ ಪ್ರಧಾನಿಗಳು ಶಂಕುಸ್ಥಾಪನೆಯನ್ನು ನೆರವೇರಿಸುವರು.ಈ ಕಾರ್ಯಕ್ರಮಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳ ಕುರಿತು ಪ್ರಧಾನಿ ಕಚೇರಿಯಿಂದ ಇದುವರೆಗೂ ಮಾಹಿತಿ ಬಂದಿಲ್ಲ.ಹೆಚ್‌ಎಎಲ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಪ್ರಾರಂಭವಾದಾಗ ರಾಜ್ಯ ಸರಕಾರದಿಂದ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಹೆಚ್‌ಎಎಲ್ ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಫೆ. 6 ರಂದು ಮಧ್ಯಾಹ್ನ 1 ಗಂಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಜನರನ್ನು ಬಿಡಲು ಪ್ರಾರಂಭ ಮಾಡಲಾಗುತ್ತಿದೆ. 2.30 ರೊಳಗೆ ಎಲ್ಲರೂ ಒಳಗೆ ಸೇರಿರಬೇಕು.ಕಾರ್ಯಕ್ರಮಕ್ಕೆ ಆಗಮಿಸುವವರು ನೀರು,ಬ್ಯಾಗ್‌ಗಳು, ಪ್ಲಾಸ್ಟಿಕ್ ಕವರ್ ಸೇರಿದಂತೆ ಇತರೆ ಯಾವುದೇ ವಸ್ತುಗಳನ್ನು ತರುವಂತಿಲ್ಲ ಎಂದು ಮನವಿ ಮಾಡಿರುವ ಅವರು, ಕಾರ್ಯಕ್ರಮದ ಸ್ಥಳದಲ್ಲೇ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

The post ಫೆ.6 ರಂದು ಹೆಲಿಕ್ಯಾಪ್ಟರ್ ಘಟಕ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ : ಜಿಲ್ಲಾಡಳಿತದಿಂದ ಸಕಲ ಸಿದ್ದತೆ : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ appeared first on ಸುವರ್ಣ ಪ್ರಗತಿ.

]]>